Untitled Document
Sign Up | Login    
Dynamic website and Portals
  
April 30, 2015

ಮತದಾನ ಕಡ್ಡಾಯ ಮಸೂದೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಮಹತ್ವದ ಪಂಚಾಯತ್‌ ರಾಜ್‌ ವಿಧೇಯಕಕ್ಕೆ ರಾಜ್ಯಪಾಲ ವಾಜುಭಾಯಿ ವಾಲಾ ಕೊನೆಗೂ ಅಂಕಿತ ಹಾಕಿದ್ದಾರೆ.

ಹೊಸದಾಗಿ ರಚನೆಯಾಗಿರುವ 454 ಗ್ರಾಮ ಪಂಚಾಯಿತಿಗಳು ಸೇರಿದಂತೆ 6083 ಗ್ರಾಮ ಪಂಚಾಯಿತಿ ಸೇರಿದಂತೆ ಮುಂದೆ ನಡೆಯುವ ಎಲ್ಲ ಪಂಚಾಯಿತಿಗಳ ಚುನಾವಣೆಯಲ್ಲಿ ಮತದಾನ ಕಡ್ಡಾಯವಾಗಲಿದೆ. ಈ ಕಾಯ್ದೆಯು ಮೇ ಕೊನೆಯ ಅಥವಾ ಜೂನ್‌ ಮೊದಲ ವಾರದಲ್ಲಿ ನಡೆಯಲಿರುವ 6083 ಗ್ರಾಮ ಪಂಚಾಯಿತಿಗಳಿಗೆ ಅನ್ವಯವಾಗಲಿದ್ದು, ಮತದಾನ ಕಡ್ಡಾಯವಾಗಲಿದೆ.

ಹೊಸ ಕಾಯ್ದೆಯಂತೆ ಇನ್ನುಮುಂದೆ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ 5 ವರ್ಷಗಳಾಗಲಿದೆ. ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಿರಿಸಿದ ಪ್ರವರ್ಗ ಮೀಸಲಿನ ಸರದಿ 10 ವರ್ಷಗಳಿಗೆ ಮುಂದುವರಿಯಲಿದೆ. ಶೇ.50 ಕ್ಕೆ ಮೀರದಂತೆ ಮಹಿಳೆಯರಿಗೆ ಮೀಸಲಾತಿ ನಿಗದಿ ಯಾಗಲಿದೆ. ನೂತನ ಕಾಯ್ದೆ ಮೂಲಕ ಈ ಕಾಯಿದೆ ಮೂಲಕ ಪಂಚಾಯಿತಿ ಚುನಾವಣೆಗಳಲ್ಲೂ ನೋಟಾ ವ್ಯವಸ್ಥೆ ಜಾರಿಯಾಗಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್‌, ವಿಧಾನಮಂಡಲದಲ್ಲಿ ಅಂಗೀಕೃತ ವಾಗಿದ್ದ ಪಂಚಾಯತ್‌ ರಾಜ್‌ ವಿಧೇಯಕದ ಕಡ್ಡಾಯ ಮತದಾನ ಸೇರಿದಂತೆ ಕೆಲವು ಅಂಶಗಳಿಗೆ ರಾಜ್ಯಪಾಲರು ವಿವರಣೆ ಕೇಳಿದ್ದರು. ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನೂ ಕೇಳಿದ್ದರು. ಇದೆಲ್ಲವನ್ನೂ ಸಂಪೂರ್ಣವಾಗಿ ವಿವರಿಸಿದ ಮೇಲೆ ಈ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited