Untitled Document
Sign Up | Login    
Dynamic website and Portals
  
May 2, 2015

ಕೆರೆ ಒತ್ತುವರಿ ತೆರವು: 70 ಕಟ್ಟಡ ನೆಲಸಮ

BW News Bureau : ಕೆರೆ ಒತ್ತುವರಿ ವಿರುದ್ಧ ಸಮರ ಸಾರಿರುವ ಜಿಲ್ಲಾಡಳಿತ ಬಾಣಸವಾಡಿ ಬಳಿಯ ಹೆಚ್.ಎಸ್.ಆರ್.ಬಡಾವಣೆಯಲ್ಲಿ 70ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಿದ್ದು, ಸುಮಾರು 2 ಎಕರೆ ಪ್ರದೇಶವನ್ನು ತನ್ನ ಸುಪರ್ದಿಗೆ ಪಡೆದಿದೆ.

ತಹಸೀಲ್ದಾರ್ ಹರೀಶ್‌ ನಾಯಕ್ ಅವರ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಸಿಬ್ಬಂದಿ ವರ್ಗ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಬೆಳಗ್ಗೆ 7 ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿತು.

ಸುಮಾರು 42.38 ಎಕರೆ ಪ್ರದೇಶದಲ್ಲಿರುವ ಕೆರೆಯಲ್ಲಿ ಒಟ್ಟು 17.38 ಗುಂಟೆ ಒತ್ತುವರಿ ಮಾಡಿಕೊಳ್ಳಲಾಗಿದ್ದು, ಪ್ರಸ್ತುತ ಮಾರುಕಟ್ಟೆ ಬೆಲೆ 10 ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ. 2009ರಲ್ಲಿ ಸರ್ವೆ ಮಾಡಿ ನೋಟೀಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಒತ್ತುವರಿದಾರರು ಮರು ಸರ್ವೆ ನಡೆಸುವಂತೆ ಕೋರ್ಟ್‌ನ ಮೊರೆ ಹೋಗಿದ್ದರು. ಆದರೆ ಕೋರ್ಟ್ ಒತ್ತುವರಿ ತೆರವುಗೊಳಿಸುವಂತೆ ಆದೇಶ ನೀಡಿತ್ತು.

ಬೆಳಗ್ಗೆಯಿಂದ ನಡೆದ ಕಾರ್ಯಾಚರಣೆಯಲ್ಲಿ 3 ಎಕರೆ ಪ್ರದೇಶದಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದ್ದ ಕೇವಲ ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಮಾತ್ರ ತೆರವುಗೊಳಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited