Untitled Document
Sign Up | Login    
Dynamic website and Portals
  
May 4, 2015

ವಾಜಪೇಯಿ ಅವರಿಗೆ ಭಾರತ ರತ್ನ ಕೊಡಬಾರದಿತ್ತು: ಅಸಾದುದ್ದೀನ್ ಓವೈಸಿ

 ಅಸಾದುದ್ದೀನ್ ಓವೈಸಿ ಅಸಾದುದ್ದೀನ್ ಓವೈಸಿ

ನವದೆಹಲಿ : 'ವಿವಾದಾತ್ಮಕ ಹೇಳಿಕೆ' ಮೂಲಕವೇ ಗುರುತಿಸಿಕೊಂಡಿರುವ (ಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಈಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ತಕರಾರು ತೆಗೆದಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಭಾರತ ರತ್ನ ನೀಡಿರುವುದು ತಪ್ಪು ಎಂದು ತಗಾದೆ ತೆಗೆದಿದ್ದಾರೆ.

ಕೇಂದ್ರ ಸರ್ಕಾರ ಈ ಬಾರಿ ವಾಜಪೇಯಿ ಮತ್ತು ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ನ ಪಂಡಿತ ಮದನ್ ಮೋಹನ್ ಮಾಳವಿಯಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಿದೆ. ಮಾರ್ಚ್ 27ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯಲ್ಲಿರುವ ವಾಜಪೇಯಿ ನಿವಾಸಕ್ಕೆ ತೆರಳಿ ಭಾರತರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದರು.

ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ಕರ್ನಾಟಕದಲ್ಲೂ ವಿರೋಧ ವ್ಯಕ್ತವಾಗಿತ್ತು. ವಾಯಪೇಯಿ ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ, ಮುಂದೊಂದು ದಿನ ಗೋಡ್ಸೆಗೂ ಭಾರತ ರತ್ನ ನೀಡಿದರೂ ಆಶ್ಚರ್ಯವಿಲ್ಲ ಎಂದು ಹೇಳಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited