Untitled Document
Sign Up | Login    
Dynamic website and Portals
  
May 5, 2015

ಗ್ರಾಮ ಪಂಚಾಯತ್ ಚುನಾವಣೆ 2 ದಿನದಲ್ಲಿ ಘೋಷಣೆ ಸಾಧ್ಯತೆ

ಬೆಂಗಳೂರು : ಗ್ರಾಮ ಪಂಚಾಯಿತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ.

ಬಹುತೇಕ ಮೇ 26 ಅಥವಾ 27 ಇಲ್ಲವೇ ಜೂನ್‌ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2011ರ ಜನಗಣತಿ ಆಧಾರದ ಮೇಲೆ ಮೀಸಲಾತಿ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ಸಿದ್ಧಪಡಿಸಿದ್ದು, ಅದನ್ನು ಆಯೋಗ ತರಿಸಿಕೊಂಡಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ವೀಕ್ಷಕರ ಪಟ್ಟಿಯನ್ನೂ ಅಂತಿಮಗೊಳಿಸಿದೆ. ವೇಳಾಪಟ್ಟಿ ಯಾವುದೇ ಕ್ಷಣದಲ್ಲಿ ಪ್ರಕಟವಾಗಲಿದೆ. ಒಟ್ಟಾರೆ ಮುಂದಿನ ಒಂದು ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ರಾಜ್ಯದ 3 ಕೋಟಿಗೂ ಹೆಚ್ಚು ಮತದಾರರು 5850 ಗ್ರಾಮ ಪಂಚಾಯಿತ್ ಗಳ 1ಲಕ್ಷಕ್ಕೂ ಹೆಚ್ಚಿನ ಸದಸ್ಯರನ್ನು ಆಯ್ಕೆ ಮಾಡುವ ಗ್ರಾಮೀಣ ಭಾಗದ ಚುನಾವಣಾ "ಕದನ'ಕ್ಕೆ ಎಲ್ಲ ರಾಜಕೀಯ ಪಕ್ಷಗಳೂ ಸಜ್ಜಾಗಿವೆ. ಚಿಹ್ನೆ ಮೇಲೆ ಈ ಚುನಾವಣೆ ನಡೆಯದಿದ್ದರೂ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಎಂದೇ ಸ್ಪರ್ಧಿಸಿ ಪ್ರಚಾರ ನಡೆಸಲಾಗುತ್ತದೆ.

ಒಟ್ಟು 6073 ಗ್ರಾಮ ಪಂಚಾಯಿತ್ ಗಳು ರಾಜ್ಯದಲ್ಲಿದ್ದು ಆ ಪೈಕಿ 56 ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯ್ತಿ, ಪುರಸಭೆಗಳಾಗಿ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 147 ಪಂಚಾಯಿತಿಗಳಿಗೆ ತಡವಾಗಿ ಚುನಾವಣೆ ನಡೆದ ಕಾರಣ ಇನ್ನೂ ಅವಧಿ ಮುಗಿದಿಲ್ಲ. 15ರಿಂದ 20 ಗ್ರಾಮ ಪಂಚಾಯಿತಿಗಳ ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ. ಹೀಗಾಗಿ, 223 ಗ್ರಾಮ ಪಂಚಾಯಿತ್ ಗಳಿಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದ್ದು, 5850 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ. 5850 ಗ್ರಾಮ ಪಂಚಾಯಿತಿಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸದಸ್ಯರು ಇರಲಿದ್ದು 3 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. 2010ರಲ್ಲಿ ನಡೆದ ಚುನಾವಣೆಯಲ್ಲಿ 33 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಇದೀಗ ಗ್ರಾಮ ಪಂಚಾಯಿತಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮತಗಟ್ಟೆ ಸಂಖ್ಯೆ 40 ಸಾವಿರ ದಾಟುವ ನಿರೀಕ್ಷೆಯಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited