ಕೋಲ್ಕತಾ : ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಸುಮಾರು 11 ಮಂದಿ ಸಾವನ್ನಪ್ಪಿದ್ದು, ಏಳು ಕಾರ್ಮಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ಪಿಂಗ್ಲಾ ಎಂಬಲ್ಲಿ ಈ ಸ್ಫೋಟ ದುರಂತ ಸಂಭವಿಸಿದೆ. ಪಟಾಕಿ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರ ಸ್ಥಿತಿ ಚಿಂತಾಜನಕವಾಗಿದೆ.
ಸಾವನ್ನಪ್ಪಿದ್ದವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಭಾರತಿ ಘೋಷ್ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಇದರ ಮಾಲೀಕ ರಂಜನ್ ಮೈಟಿ ನಾಪತ್ತೆಯಾಗಿದ್ದಾರೆ. ಫ್ಯಾಕ್ಟರಿಯಲ್ಲಿ ಬಾಂಬ್ ತಯಾರಿಸುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.