Untitled Document
Sign Up | Login    
Dynamic website and Portals
  
May 8, 2015

ಮೇ.29ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ

ಮಾವು ಮೇಳ (ಸಂಗ್ರಹ ಚಿತ್ರ) ಮಾವು ಮೇಳ (ಸಂಗ್ರಹ ಚಿತ್ರ)

BW News Bureau : ಮೇ.29ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ ಪ್ರಾರಂಭವಾಗಲಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ ಮೇಳದಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಹಣ್ಣು ದೊರೆಯಲಿದೆ.

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಹಾಪ್‌ ಕಾಮ್ಸ್ ಜಂಟಿಯಾಗಿ ಈ ಮೇಳವನ್ನು ಆಯೋಜಿಸಿದ್ದು, ಶ್ರೀನಿವಾಸಪುರ, ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸುಮಾರು 100ಕ್ಕೂ ಹೆಚ್ಚು ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ.

ಮೇಳದಲ್ಲಿ ರಾಸಾಯನಿಕ ಬಳಸದೆ ಸಹಜವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಮಾತ್ರ ಮಾರಾಟ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ. ಬೆಳಗ್ಗೆ 8ರಿಂದ ಸಂಜೆ 7ರವರೆಗೆ ಮಳಿಗೆಗಳು ಕಾರ್ಯನಿರ್ವಹಿಸಲಿದೆ ಎಂದು ತೋಟಗಾರಿಕೆ ಇಲಾಖೆ ಮಾಹಿತಿ ನೀಡಿದೆ. ಮೇಳದಲ್ಲಿ ವಿವಿಧ ಮಾವಿನ ತಳಿಗಳಾದ ರಸಪುರಿ, ಸಿಂಧೂರ, ಮಲಗೋಬಾ, ಬಾದಾಮಿ, ನೀಲಂ, ಮಲ್ಲಿಕಾ ಸೇರಿದಂತೆ ಹಲವು ತಳಿಯ ಹಣ್ಣುಗಳ ಮಾರಾಟ ನಡೆಯಲಿದೆ.

ಲಾಲ್ ಬಾಗ್ ಹೊರತುಪಡಿಸಿ, ವೈಟ್ ಫೀಲ್ಡ್ ಬಳಿಯೂ ಮಾವಿನ ಮೇಳ ನಡೆಯುತ್ತಿದೆ. ಮೇ.10ರವಗೆರೆ ವೈಟ್ ಫೀಲ್ಡ್ ನಲ್ಲಿ ಮೇಳ ನಡೆಯಲಿದ್ದು, ಮೇಳದಲ್ಲಿ ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಮಾವು ಬೆಳೆಗಾರರು ಭಾಗವಹಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited