Untitled Document
Sign Up | Login    
Dynamic website and Portals
  
May 11, 2015

ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಲು ಯುಜಿಸಿ ಶಿಫಾರಸ್ಸು

ನವದೆಹಲಿ : ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಬೇಕೆಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ಎಲ್ಲಾ ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು, ಚಲನವಲನಗಳ ಮೇಲೆ ಗಮನಹರಿಸಲು ಅನುಕೂಲವಾಗುವುದರಿಂದ ಈ ವ್ಯವಸ್ಥೆ ಜಾರಿಗೆ ತರಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಯುಜಿಸಿ ಸೂಚನೆ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಯುಜಿಸಿ, ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಂಗುವ ಹಾಸ್ಟೆಲ್‌ ಗಳಲ್ಲಿ
ಬಯೋಮೆಟ್ರಿಕ್ ಅಳವಡಿಸಬೇಕೆಂದು ಅದು ಸಲಹೆ ಮಾಡಿದೆ.

ಈವರೆಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಚಕ್ಕರ್ ಹೊಡೆಯುವುದು, ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ನಡೆಸುವುದು, ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಿರುವುದು ಸೇರಿದಂತೆ ವಿದ್ಯಾರ್ಥಿಗಳ ಚಲನವಲನಗಳ ಬಗ್ಗೆ ಅವಲೋಕಿಸಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸುವ ಪ್ರಕರಣಗಳು ಪ್ರತಿವರ್ಷ ಮರುಕಳಿಸುತ್ತಲೇ ಇವೆ. ಇದರಿಂದ ಮನನೊಂದ ವಿದ್ಯಾರ್ಥಿಗಳು ಕಾಲೇಜು ತೊರೆಯುವುದು, ಇಲ್ಲವೆ ಆತ್ಮಹತ್ಯೆಗೆ ಶರಣಾದ ನಿದರ್ಶನಗಳಿವೆ. ಈ ಎಲ್ಲಾ ಅವಘಡಗಳನ್ನು ತಪ್ಪಿಸುವ ಉದ್ದೇಶದಿಂದಲೇ ಯುಜಿಸಿ ವಿದ್ಯಾರ್ಥಿ ಮತ್ತು ಪ್ರೊಫೆಸರುಗಳಿಗೂ ಕಡ್ಡಾಯವಾಗಿ ಬಯೋಮೆಟ್ರಿಕ್ ಅಳವಡಿಸಲು ಸೂಚನೆ ನೀಡಿದೆ.

ಇದಲ್ಲದೆ, ಯಾವುದಾದರೂ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಆನ್‌ ಲೈನ್‌ ನಲ್ಲಿ ದೂರು ನೀಡಲು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕೆಂದು ಸಲಹೆ ಮಾಡಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವೆ ಅಂತರ ಉಂಟಾಗುವುದರಿಂದ ಪ್ರತಿ ಸೆಮಿಸ್ಟರ್‌ ನಲ್ಲಿ ಎಷ್ಟು ಅಂಕಗಳನ್ನು ಪಡೆದಿದ್ದಾರೆ. ಅವರ ಶೈಕ್ಷಣಿಕ ಪ್ರಗತಿ ಯಾವ ಮಟ್ಟದಲ್ಲಿದೆ ಎಂಬುದನ್ನು ಅರಿಯಲು ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡ ಯುಜಿಸಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ನಡುವೆ ಸಮನ್ವಯ ಸಾರಲು ಸಭೆ ನಡೆಸುವಂತೆ ಶಿಫಾರಸ್ಸು ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited