ಬೆಂಗಳೂರು : ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮಧ್ಯಾಹ್ನ 2.30ಕ್ಕೆ ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಕಟಗೊಳ್ಳಲಿದೆ.
ಫಲಿತಾಂಶ ಪ್ರಕಟಗೊಂಡ ಕೆಲವೇ ಹೊತ್ತಿನಲ್ಲಿ ಇಲಾಖಾ ವೆಬ್ ಸೈಟ್ಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಆದರೆ, ಅಧಿಕೃತವಾಗಿ ವಿದ್ಯಾರ್ಥಿಗಳಿಗೆ ಫಲಿತಾಂಶ ಬುಧವಾರ ಮಧ್ಯಾಹ್ನ 3.30ಕ್ಕೆ ಆಯಾ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಕಚೇರಿಗಳಲ್ಲಿ ದೊರೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೊಹ್ಸಿನ್ ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ ಒಟ್ಟು 8,56,366 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 8,37,433 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ 4.52 ಲಕ್ಷ ಬಾಲಕರು ಹಾಗೂ 4.03 ಬಾಲಕಿಯರಿದ್ದಾರೆ. ಅಲ್ಲದೆ, 16,337 ಖಾಸಗಿ ಮತ್ತು 32,607 ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಪಡೆಯಬಹುದಾದ ವೆಬ್ಸೈಟ್ಗಳು ಹಾಗೂ ಮೊಬೈಲ್ ಸಂಖ್ಯೆಗಳ ವಿವರ ಇಲ್ಲಿದೆ
www.kseeb.kar.nic.in ; www.indiaresults.com ಅಥವಾ KAR10 ಎಂದು ಟೈಪ್ ಮಾಡಿ, ಸ್ಪೇಸ್ ಕೊಟ್ಟು 567675 ಅಥವಾ KAR ಎಂದು ಟೈಪ್ ಮಾಡಿ, ಸ್ಪೇಸ್ ಕೊಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಕಳುಹಿಸಬಹುದು. ಮೊ: 98115 54192, 98736 98968.