Untitled Document
Sign Up | Login    
Dynamic website and Portals
  
May 12, 2015

ಕೋಲ್ಕತ್ತ ಪ್ರಾದೇಶಿಕ ರೈಲಿನಲ್ಲಿ ಸ್ಪೋಟ: 17 ಜನರಿಗೆ ಗಾಯ

ಕೋಲ್ಕತ್ತಾ : ಕೋಲ್ಕತ್ತಾದ ಪ್ರಾದೇಶಿಕ ರೈಲಿನಲ್ಲಿ ಸ್ಪೋಟ ಸಂಭವಿಸಿದೆ. ಸೀಲ್ಧಾಹ್ ಮತ್ತು ಕೃಷ್ಣನಗರ ನಡೆವೆ ಚಲಿಸುತ್ತಿದ್ದ ಪ್ರಾದೇಶಿಕ ರೈಲಿನಲ್ಲಿ ಸುಮಾರು ಬೆಳಗ್ಗೆ 3:55 ಕ್ಕೆ ಸ್ಪೋಟ ಸಂಭವಿಸಿದ್ದು 17 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪರಿಸ್ಥಿಯನ್ನು ಅವಲೋಕಿಸಿದ ಪೊಲೀಸರು ಇದು ಲಘು ತೀವ್ರತೆಯ ಸ್ಪೋಟ ಎಂದು ತಿಳಿಸಿದ್ದಾರೆ. ಗಾಯಗೊಂಡವರನ್ನು ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಚ್ 5 ರಲ್ಲಿ ಇಬ್ಬರು ಜಗಳವಾಡುತ್ತಿದ್ದಾಗ ಈ ಸ್ಪೋಟ ಸಂಭವಿಸಿತು ಎಂದು ವರದಿಯಾಗಿದೆ. ಈ ಜಗಳದಲ್ಲಿ ಒಬ್ಬರ ಮೇಲೊಬ್ಬರು ಬಾಂಬ್ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.

ಇದು ದಿನದ ಮೊದಲ ರೈಲಾಗಿದ್ದರಿಂದ ಕೋಚ್ ಗಳು ಜನರಿಂದ ಕಿಕ್ಕಿರಿಯುತ್ತಿದ್ದವು ಎಂದು ತಿಳಿದುಬಂದಿದೆ. ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited