Untitled Document
Sign Up | Login    
Dynamic website and Portals
  
May 13, 2015

ಜಯಲಲಿತಾ ಖುಲಾಸೆ: ಸುಪ್ರೀಂ ಕೋರ್ಟಿಗೆ ಮೇಲ್ಮನವಿ-ಸುಬ್ರಮಣಿಯನ್‌ ಸ್ವಾಮಿ

ಸುಬ್ರಹ್ಮಣ್ಯನ್ ಸ್ವಾಮಿ ಸುಬ್ರಹ್ಮಣ್ಯನ್ ಸ್ವಾಮಿ

ಚೆನ್ನೈ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ನೀಡಿದ್ದಾರೆ.

ಕರ್ನಾಟಕ ಹೈಕೋರ್ಟ್‌ ನ ತೀರ್ಪು ತಪ್ಪು ಗಣಿತದ ದುರಂತ ಎಂಬುದನ್ನು ಸುಪ್ರೀಂಕೋರ್ಟ್‌ ಗೆ ಸಲ್ಲಿಸಲಿರುವ ಅರ್ಜಿಯಲ್ಲಿ ಸಾಬೀತುಪಡಿಸುತ್ತೇನೆ. ಒಂದು ವೇಳೆ ಜಯಲಲಿತಾ ಮುಖ್ಯಮಂತ್ರಿಯಾದರೆ ಮತ್ತೂಮ್ಮೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

1992ರಿಂದ 1996ರವರೆಗೆ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಯಲಲಿತಾ 66.5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದರು ಎಂದು ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗಿ 18 ವರ್ಷಗಳ ನಂತರ ಬೆಂಗಳೂರಿನ ವಿಶೇಷ ನ್ಯಾಯಾಲಯ 2014ರ ಸೆ. 27ರಂದು ಜಯಲಲಿತಾ ಅವರನ್ನು ದೋಷಿ ಎಂದು ಪರಿಗಣಿಸಿ 4 ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂ. ದಂಡ ವಿಧಿಸಿತ್ತು. ತೀರ್ಪಿನ ವೇಳೆ ಹಾಜರಿದ್ದ ಜಯಲಲಿತಾ ಅವರನ್ನು ನೇರವಾಗಿ ಜೈಲಿಗೆ ಕಳುಹಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಜಯಲಲಿತಾ ಹೈಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಕೋರ್ಟ್‌ ಜಾಮೀನು ತಿರಸ್ಕರಿಸಿದ್ದರಿಂದ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. 2014ರ ಅ.17ರಂದು ಜಾಮೀನು ನೀಡಿದ್ದ ಸುಪ್ರೀಂಕೋರ್ಟ್‌, ಮೇಲ್ಮನವಿ ವಿಚಾರಣೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಅಂತಿಮ ತೀರ್ಪು ಪ್ರಕಟಿಸುವಂತೆ ಹೈಕೋರ್ಟ್‌ಗೆ ಆದೇಶಿಸಿತ್ತು.

ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಮೇ 11ರಂದು ಹೈಕೋರ್ಟ್‌ ನಲ್ಲಿ ಪ್ರಕಟವಾಯಿತು. ಜಯಲಲಿತಾ ಸೇರಿ ನಾಲ್ವರು ಆರೋಪಿಗಳು ನಿರ್ದೋಷಿಗಳು ಎಂದು ನ್ಯಾ.ಸಿ.ಆರ್.ಕುಮಾರಸ್ವಾಮಿ ಮಹತ್ವದ ತೀರ್ಪು ಪ್ರಕಟಿಸಿದ್ದರು. ಈ ಮೂಲಕ ಹೈಕೋರ್ಟ್, ಅಧೀನ ನ್ಯಾಯಾಲಯದ ತೀರ್ಪನ್ನು ಖುಲಾಸೆಗೊಳಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited