Untitled Document
Sign Up | Login    
Dynamic website and Portals
  
May 14, 2015

ಕಪ್ಪು ಹಣ ಮಸೂದೆಗೆ ಸಂಸತ್‌ ನ ಉಭಯ ಸದನಗಳ ಸಮ್ಮತಿ

ನವದೆಹಲಿ : ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ.

ಮಸೂದೆ ಅನ್ವಯ, ವಿದೇಶದಲ್ಲಿ ಕಪ್ಪು ಹಣ ಹೊಂದಿದ್ದವರು, ಈ ಕುರಿತು ಘೋಷಣೆ ಮಾಡಲು 60 ದಿನಗಳ ನಿಗದಿತ ಸಮಯ ನೀಡಲಾಗುತ್ತದೆ. ಘೋಷಣೆ ಮಾಡಿಕೊಂಡವರಿಗೆ, ಘೋಷಣೆ ಮಾಡಿದ ಮೊತ್ತದ ಶೇ.30ರಷ್ಟು ತೆರಿಗೆ ಮತ್ತು ಶೇ.30ರಷ್ಟು ದಂಡ ವಿಧಿಸಲಾಗುವುದು. ಆದರೆ ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಲಾಗುವುದಿಲ್ಲ.

ಒಂದು ವೇಳೆ ಈ ಅವಧಿಯಲ್ಲಿ ಯಾವುದೇ ಘೋಷಣೆ ಮಾಡದೆ, ಬಳಿಕ ಕಪ್ಪು ಹಣ ಪತ್ತೆಯಾದಲ್ಲಿ, ಪೂರ್ತಿ ಹಣವನ್ನು ಸರ್ಕಾರ ವಶಪಡಿಸಿಕೊಂಡು, ಅವರ ವಿರುದ್ಧ ಕಠಿಣ ಕಾನೂನು ಹೋರಾಟ ನಡೆಸಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited