ನವದೆಹಲಿ : ತಮ್ಮ ಸರ್ಕಾರ ಹಾಗೂ ಸಚಿವರು, ಶಾಸಕರ ವಿರುದ್ಧ ವರದಿ ಬಿತ್ತರಿಸಿದರೆ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಸುತ್ತೋಲೆಗೆ ಸುಪ್ರೀಂ ಕೋರ್ಟ್ ನ ಜಸ್ಟೀಸ್ ದೀಪಕ್ ಮಿಶ್ರಾ ನೇತೃತ್ವದ ಪೀಠ ತಡೆ ನೀಡಿ ಈ ಬಗ್ಗೆ ಆರು ವಾರಗಳೊಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.
ಮಾಧ್ಯಮಗಳ ವಿಚಾರದಲ್ಲಿ ಸುತ್ತೋಲೆ ಹೊರಡಿಸುವ ಅಗತ್ಯವಿತ್ತೇ ಎಂದು ಪ್ರಶ್ನಿಸಿರುವ ನ್ಯಾಯಾಲಯ, ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.