Untitled Document
Sign Up | Login    
Dynamic website and Portals
  
May 16, 2015

ಜಯಲಲಿತಾ ಮತ್ತೆ ಪಟ್ಟಕ್ಕೇರಲು ಸಿದ್ಧತೆ: ಮೇ 22ಕ್ಕೆ ಶಾಸಕಾಂಗ ಪಕ್ಷದ ಸಭೆ

ಎಐಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಎಐಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ

ಚೆನ್ನೈ : ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ಅಣ್ಣಾಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಅವರು ಐದನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಪಟ್ಟಕ್ಕೇರಲು ವೇದಿಕೆ ಸಿದ್ಧವಾಗುತ್ತಿದೆ.

ಜಯಲಲಿತಾ ಮೇ 22ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಅಂದು ಅವರನ್ನು ಶಾಸಕಾಂಗ ಪಕ್ಷದ ನೂತನ ನಾಯಕಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಅಣ್ಣಾಡಿಎಂಕೆಯ ಮೂಲಗಳು ತಿಳಿಸಿದೆ.

ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ನಂತರ ಮೇ 22ರಿಂದ ಮೇ 24ರೊಳಗೆ ಯಾವುದೇ ಕ್ಷಣದಲ್ಲಿ ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಜಯಲಲಿತಾ ಅವರಿಂದ ಸೂಚನೆ ಬರುತ್ತಿದ್ದಂತೆ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹಾಗೂ ಅವರ ಸಂಪುಟದ ಸದಸ್ಯರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited