Untitled Document
Sign Up | Login    
Dynamic website and Portals
  
May 16, 2015

ಚೀನಾದಲ್ಲಿ ಮೋದಿ: 22 ಬಿಲಿಯನ್ ಡಾಲರ್ ಮೌಲ್ಯದ ಒಪ್ಪಂದಗಳಿಗೆ ಭಾರತ-ಚೀನಾ ಸಹಿ

ಶಾಂಘೈ : ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೂರನೇ ಹಾಗೂ ಕಡೆಯ ದಿನವಾದ ಶನಿವಾರ ಭಾರತ-ಚೀನಾ ವ್ಯವಹಾರ ವೇದಿಕೆಯಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ 22 ಬಿಲಿಯನ್ ಡಾಲರ್ ಮೌಲ್ಯದ 21 ವಾಣಿಜ್ಯ ಒಪ್ಪಂದಗಳಿಗೆ ಸಹಿ ಹಾಕಿಲಾಗಿದೆ.

ಭಾರತ-ಚೀನಾ ವ್ಯವಹಾರ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಬಂಡವಾಳ ಹೂಡಿಕೆ ಮಾಡಲು ಚೀನಾದ ಉದ್ಯಮಗಳಿಗೆ ಭಾರತ ಐತಿಹಾಸಿಕ ಅವಕಾಶ ನೀಡುತ್ತಿದೆ ಎಂದು ಹೇಳಿದರು.

ಮೇಕ್ ಇನ್ ಇಂಡಿಯಾದ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ವಿವರಿಸಿದ ಪ್ರಧಾನಿ ಮೋದಿ, ಭಾರತದಲ್ಲಿ ತಮ್ಮ ಉತ್ಪನ್ನಗಳನ್ನು ತಯಾರಿಸುವಂತೆ ಉದ್ಯಮಿಗಳಿಗೆ ಕರೆ ನೀಡಿದರು.

ಭಾರತ-ಚೀನಾ ವ್ಯವಹಾರ ವೇದಿಕೆಯಲ್ಲಿ 22 ಬಿಲಿಯನ್ ಡಾಲರ್ ಮೌಲ್ಯದ ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಟ್ವೀಟ್ ಮಾಡಿದ್ದಾರೆ.

"ನಾವು ಭಾರತದ ಬಗ್ಗೆ ಉತ್ಸುಕರಾಗಿದ್ದೇವೆ. ಹಾಗೆಯೆ 'ಮೇಕ್ ಇನ್ ಇಂಡಿಯಾ' ಮತ್ತು ಡಿಜಿಟಲ್ ಇಂಡಿಯ ಬಗ್ಗೆಯೂ" ಎಂದು ಆಲಿಬಾಬ ಸಿಇಒ ಜ್ಯಾಕ್ ಮಾ ಮೋದಿ ಅವರಿಗೆ ತಿಳಿಸಿದ್ದಾರೆ. "ನಮಗೆ ಭಾರತದ ಬಗ್ಗೆ ಭರವಸೆ ಇದೆ. ಭಾರತ ಅತಿ ದೊಡ್ಡ ಮಾರುಕಟ್ಟೆ ಮತ್ತು ಕೆಲಸದಾರರನ್ನು ಒದಗಿಸಿಕೊಡುತ್ತದೆ" ಎಂದು ಎಸ್ ಎ ಏನ್ ವೈ ಅಧ್ಯಕ್ಷ ಲಿಯಾಂಗ್ ವೆಂಗೆನ್ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited