Untitled Document
Sign Up | Login    
Dynamic website and Portals
  
May 22, 2015

ದೆಹಲಿಯ ರಾಜಪಥದಲ್ಲಿ ಪ್ರಧಾನಿ ಮೋದಿ, ಸಚಿವರ ಯೋಗಾಭ್ಯಾಸ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ಜೂನ್‌ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವಸಂಸ್ಥೆ ಘೋಷಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆ ಕ್ಷಣವನ್ನು ಐತಿಹಾಸಿಕವಾಗಿಸಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಜೂ.21ರಂದು ರಾಜಪಥದಲ್ಲಿ ಯೋಗಾಭ್ಯಾಸ ಮಾಡಲು ನಿರ್ಧರಿಸಿದ್ದಾರೆ.

ರಾಜಪಥದಲ್ಲಿ ಮೋದಿ ಜತೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಕೂಡಾ ಯೋಗ ಮಾಡಲಿದ್ದಾರೆ. ಅವರ ಸಚಿವ ಸಂಪುಟದ ಹಲವು ಸಹೋದ್ಯೋಗಿಗಳು ಕೂಡಾ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜಕೀಯ ನಾಯಕರು ಯೋಗ ಮಾಡುವುದು ಅಪರೂಪವಲ್ಲವಾದರೂ ಒಂದು ದೇಶದ ಪ್ರಧಾನಿಯೊಬ್ಬರು ಬಹಿರಂಗವಾಗಿ ಇಂಥ ಪ್ರದರ್ಶನಕ್ಕೆ ಮುಂದಾಗಿರುವುದು ಅಪರೂಪ. ಅದರಲ್ಲೂ ಪ್ರತಿವರ್ಷ ದೇಶದ ಮಿಲಿಟರಿ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗುವ ದೆಹಲಿಯ ರಾಜಪಥವನ್ನೇ ಮೋದಿ ತನ್ನ ಈ ಕಾರ್ಯಕ್ರಮಕ್ಕೆ ಆಯ್ದುಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಯೋಗಕ್ಕೆ ವಿಶಿಷ್ಟ ಮಾನ್ಯತೆ ದೊರಕಿಸಲು ಭಾರತ ಹಿಂದಿನಿಂದಲೂ ಯತ್ನಿಸಿತ್ತು. ಇತ್ತೀಚೆಗೆ ವಿಶ್ವ ಸಂಸ್ಥೆಯೂ ಅದಕ್ಕೆ ತನ್ನ ಬೆಂಬಲ ನೀಡುವ ಮೂಲಕ ಜೂ.21ಅನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಿತ್ತು. ಹೀಗೆ ಘೋಷಣೆಯಾದ ಬಳಿಕ, ಮೊದಲ ಬಾರಿಗೆ ಈ ದಿನವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಐತಿಹಾಸಿಕವಾಗಿ ಮಾರ್ಪಡಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದೇ ಕಾರಣಕ್ಕಾಗಿಯೇ ರಾಜಪಥವನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited