ನವದೆಹಲಿ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ.
ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಾಹಿತಿ ನೀಡಿದ್ದು, ಮೇಲ್ಮನವಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದ್ದಾರೆ.
ಕಾನೂನು ಇಲಾಖೆ ಹೈಕೋರ್ಟ್ ತೀರ್ಪನ್ನು ಪರಿಶೀಲಿಸುತ್ತಿದೆ. ಕಾನೂನು ಇಲಾಖೆ ಅಧಿಕಾರಿಗಳು ಏನು ಹೇಳುತ್ತಾರೆ ನೋಡುತ್ತೇವೆ. ಅಡ್ವೊಕೇಟ್ ಜನರಲ್, ವಿಶೇಷ ಅಭಿಯೋಜಕರ ಅಭಿಪ್ರಾಯವನ್ನು ಪಡೆದು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈಗಾಗಲೇ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ವಿಶೇಷ ಅಭಿಯೋಜಕ ಬಿ.ವಿ.ಆಚಾರ್ಯ ಮೇಲ್ಮನವಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.