Untitled Document
Sign Up | Login    
Dynamic website and Portals
  
May 23, 2015

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ಮೈಸೂರು : ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ ಭ್ರಷ್ಟಾಚಾರದ ವಿರುದ್ಧ ನಿಲ್ಲುತ್ತಿಲ್ಲ ಎಂಬ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿ ಎಂದರು.

ಜಯಲಲಿತಾರವರ ಹಗರಣ ಸಣ್ಣ ಪುಟ್ಟ ಹಗರಣವಲ್ಲ, ಸಾವಿರಾರು ಕೋಟಿ ರೂ.ಗಳ ಹಗರಣವಾಗಿದ್ದು ಭ್ರಷ್ಟಾಚಾರ ನಡೆಸಿದವರಿಗೆ ಶಿಕ್ಷೆಯಾದರೆ ಭ್ರಷ್ಟಾಚಾರಿಗಳಿಗೆ ಪಾಠ ಕಲಿಸಿದಂತಾಗುತ್ತದೆ. ಇಲ್ಲದಿದ್ದರೆ ಭ್ರಷ್ಟಾಚಾರಿಗಳು ಹೆದರದೆ ಮತ್ತಷ್ಟು ಹಗರಣಗಳನ್ನು ಮಾಡುತ್ತಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಏಕೆ ಮೀನಾಮೇಷ ಎಣಿಸುತ್ತಿದೆ ಎಂದು ಪ್ರಶ್ನಿಸಿದ ಅವರು ಕಾನೂನು ತಜ್ಞರು ಈಗಾಗಲೇ ಈ ಪ್ರಕರಣಕ್ಕೆ ಸಂಬಂದಿಸಿದಂತೆ ಮೇಲ್ಮನವಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ. ಹಾಗಿದ್ದೂ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು. ರಾಜ್ಯ ಸರ್ಕಾರಕ್ಕೆ ಇನ್ನು ಮೂರು ವರ್ಷಗಳ ಅವಧಿ ಬಾಕಿ ಇರುತ್ತದೆ. ಕಳೆದ 2 ವರ್ಷಗಳಲ್ಲಿ ಸರ್ಕಾರ ಮಾಡಿದ ಅಭಿವೃದ್ಧಿ ಮಾತ್ರ ಶೂನ್ಯ ಉಳಿದ ಮೂರು ವರ್ಷಗಳಲ್ಲಿ ಕೆಲಸ ಮಾಡಲು ಸಾಧ್ಯವಾದರೆ ಮಾಡಲಿ ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಟೀಕಿಸಿದರು.

ಸಿದ್ದರಾಮಯ್ಯನವರಿಗೆ ಅಧಿಕಾರ ಸಿಕ್ಕಿರುವುದು ಒಂದು ಅದೃಷ್ಟ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯಾರೂ ಇಲ್ಲ ಅವರು ಒಬ್ಬೊಂಟಿಯಾಗಿದ್ದಾರೆ. ತಮ್ಮ ಸಚಿವ ಸಂಪುಟವನ್ನು ನಿಭಾಯಿಸಲು ಆಗುತ್ತಿಲ್ಲ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited