ನವದೆಹಲಿ : ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಅಧಿಕಾರಕ್ಕೆ ಬಂದು ವರ್ಷ ಪೂರ್ಣಗೊಳ್ಳಲಿರುವ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿಕರಿಗಾಗಿಯೇ ಮೀಸಲಾಗಿರುವ ದೂರದರ್ಶನದ ಹೊಸ ವಾಹಿನಿ 'ಕಿಸಾನ್ ಟಿ.ವಿ.'ಗೆ ಚಾಲನೆ ನೀಡಲಿದ್ದಾರೆ.
ಕಿಸಾನ್ ಟಿ.ವಿ.ಯ ಚಾಲನೆಗೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಿದರು.
2014ರ ಬಜೆಟ್ ಭಾಷಣದಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ, ರೈತರಿಗಾಗಿಯೇ 'ಕಿಸಾನ್ ಟಿ.ವಿ.' ವಾಹಿನಿ ಆರಂಭಿಸುವ ಘೋಷಣೆ ಮಾಡಿದ್ದರು. ದೂರದರ್ಶನದ ಈ ಹೊಸ ವಾಹಿನಿಯು ಸುಮಾರು 100ಕೋಟಿ ರೂ. ವೆಚ್ಚದಲ್ಲಿ ಆರಂಭಗೊಳ್ಳಲಿದೆ.
ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್ಎಸ್ ಕಿಲ್ತಾನ್ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಾರ್ಪಣೆ ಮಾಡಿದರು.