ಕಾಶ್ಮೀರ : ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೊಪೊರೆಯಲ್ಲಿರುವ ಟೆಲೆಕಾಂ ಔಟ್ ಲೆಟ್ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರಿಕರು ಗಾಯಗೊಂಡಿದ್ದಾರೆ.
ಶ್ರೀನಗರದಿಂದ 52 ಕಿ.ಮೀ ದೂರದಲ್ಲಿರುವ ಸೊಪೊರೆಯ ಇಖ್ಬಾಲ್ ಮಾರುಕಟ್ಟೆಯಲ್ಲಿರುವ ಬಿಎಸ್ ಎನ್ ಎಲ್ ಶೋರೂಂ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೆಲೆಕಾಂ ಆಪರೆಟರ್ಗಳನ್ನು ಗುರಿಯಾಗಿಸಿಕೊಂಡು ಉಗ್ರರು ಈ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಕಳೆದ 48 ಗಂಟೆಗಳಲ್ಲಿ ನಡೆದ ಎರಡನೇ ದಾಳಿ ಇದಾಗಿದೆ.
ಸ್ಥಳಕ್ಕೆ ರಕ್ಷಣಾ ಪಡೆಗಳು ಧಾವಿಸಿದ್ದು, ಗುಂಡಿನ ದಾಳಿ ನಡೆಸಿದ ಶಂಕಿತ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.