Untitled Document
Sign Up | Login    
Dynamic website and Portals
  
May 29, 2015

ಗ್ರಾಮ ಪಂಚಾಯಿತಿ ಚುನಾವಣೆ: ಮೊದಲ ಹಂತದ ಮತದಾನ ಆರಂಭ

15 ಜಿಲ್ಲೆಗಳಲ್ಲಿ ಒಟ್ಟು 3,156 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ 7ಕ್ಕೆ ಆರಂಭಗೊಂಡಿದೆ. 15 ಜಿಲ್ಲೆಗಳಲ್ಲಿ ಒಟ್ಟು 3,156 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. ಮತದಾನ ಸಂಜೆ 5ಗೆ ಮುಕ್ತಾಯವಾಗಲಿದೆ.

ಈ ಬಾರಿ ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 48621 ಅಭ್ಯರ್ಥಿಗಳಿದ್ದು, ಇವರ ಭವಿಷ್ಯವನ್ನು 1,20,663 ಮತದಾರರು ನಿರ್ಧರಿಸಲಿದ್ದಾರೆ.

ಮೈಸೂರು ಮತ್ತು ಬೆಳಗಾವಿ ವಿಭಾಗ ವ್ಯಾಪ್ತಿಯ 43,579 ಗ್ರಾಮ ಪಂಚಾಯಿತಿ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಹಂತದ ಚುನಾವಣೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಾಮರಾಜನಗರ, ಬೆಳಗಾವಿ, ವಿಜಯಪುರ, ಕೊಡಗು, ಮಂಡ್ಯ, ಮೈಸೂರು, ಬಾಗಲಕೋಟೆ, ಧಾರವಾಡ, ಗದಗ, ಉತ್ತರ ಕನ್ನಡ ಹಾಗೂ ಹಾವೇರಿ ಜಿಲ್ಲೆಗಳ 3,156 ಗ್ರಾಮ ಪಂಚಾಯಿತಿಯಲ್ಲಿ 48,621 ಸ್ಥಾನಗಳಲ್ಲಿ ಪೈಪೋಟಿ ನಡೆಯಲಿದೆ. ಈ ಪೈಕಿ 554 ಸ್ಥಾನಗಳಿಗೆ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ. 4,460 ಸದಸ್ಯ ಸ್ಥಾನಗಳಿಗೆ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳು ಗುರುವಾರವೇ ಆಯಾ ತಾಲೂಕಿನಲ್ಲಿ ನಿಗದಿಪಡಿಸಿರುವ ಮತಗಟ್ಟೆಗಳಿಗೆ ಚುನಾವಣಾ ಸಾಮಗ್ರಿಯೊಂದಿಗೆ ತೆರಳಿದ್ದಾರೆ. ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ನಡೆದಿದ್ದು, ನಾಳೆ ಸಂಜೆ ತಾಲೂಕು ಕೇಂದ್ರಗಳಲ್ಲೇ ಡಿ ಮಸ್ಟರಿಂಗ್ ಕೂಡ ನಡೆಯುತ್ತದೆ. ಜೂನ್ 5ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆದು ಅಂದು ರಾತ್ರಿ ವೇಳೆಗೆ ಫಲಿತಾಂಶ ಹೊರ ಬೀಳಲಿದೆ.

ಬೀದರ್ ಜಿಲ್ಲೆಯಲ್ಲಿ ಮಾತ್ರ ಪ್ರಾಯೋಗಿಕವಾಗಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬಳಕೆ ಮಾಡಲಾಗುತ್ತಿದೆ. ಉಳಿದ ಕಡೆಗಳಲ್ಲಿ ಬ್ಯಾಲೆಟ್ ಪೇಪರ್​ನಲ್ಲಿ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧಾ ಕಣದಲ್ಲಿರುವ ಯಾವ ಅಭ್ಯರ್ಥಿಗಳೂ ನಮ್ಮ ಆಯ್ಕೆ ಅಲ್ಲ ಎಂದು ದಾಖಲಿಸಲು ಅವಕಾಶವಿರುವ ’ನೋಟಾ’ ಪದ್ಧತಿ ಈ ಬಾರಿ ಜಾರಿಯಲ್ಲಿಲ್ಲ.

ಅಧಿಕಾರಾರೂಢ ಸಿದ್ಧರಾಮಯ್ಯ ಸರಕಾರಕ್ಕೆ ಈ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು, ಚುನಾವಣಾ ಫಲಿತಾಂಶ ಅವರ ಆಡಳಿತದ ಬಗ್ಗೆ ಜನಾಭಿಪ್ರಾಯ ಎಂದು ಪರಿಗಣಿಸಲಾಗುತ್ತಿದೆ. ಅಲ್ಲದೆ, ಅದು ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ಪೂರಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited