ನವದೆಹಲಿ : ಭ್ರಷ್ಟಾಚಾರ ಪ್ರಕರಣಗಳಲ್ಲಿ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬಹುದು ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ದೆಹಲಿ ಸರ್ಕಾರಕ್ಕೆ ಕೇಂದ್ರ ಗೃಹಸಚಿವಾಲಯದ ಸುತ್ತೋಲೆಗೆ ಸಂಬಂಧಿಸಿದಂತೆ ಮೇ 25ರ ಹೈಕೋರ್ಟ್ ಆದೇಶದಿಂದ ಪ್ರಭಾವಿತರಾಗದೇ ಪ್ರಕರಣ ಇತ್ಯರ್ಥಗೊಳಿಸುವಂತೆ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಗೆ ಸೂಚನೆ ನೀಡಿದೆ.
3 ವಾರಗಳೊಳಗೆ ಉತ್ತರ ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಅದೇ ರೀತಿ ಮೆರಿಟ್ ಆಧಾರದ ಮೇಲೆ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಗೆ ನಿರ್ದೇಶನ ನೀಡಿದೆ.