ಶ್ರೀನಗರ : ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ ದಾರ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ಗಡಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ.
ಬೆಳಗ್ಗೆ 4 ಗಂಟೆಯ ವೇಳೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಗಡಿ ನುಗ್ಗಲು ಯತ್ನಿಸುತ್ತಿದ್ದ ವೇಳೆ ಸೇನಾ ಪಡೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಉಗ್ರರು ಸೇನಾ ಪಡೆಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಗಡಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು ಎರಡೂ ಕಡೆಗಳಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಮೇ 25 ರಂದು ಗಡಿ ನುಸುಳುತ್ತಿದ್ದ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಮತ್ತು ಓರ್ವ ಉಗ್ರ ಹತ್ಯೆಗೀಡಾಗಿದ್ದ.