Untitled Document
Sign Up | Login    
Dynamic website and Portals
  
June 1, 2015

ಇಸ್ರೇಲ್ ಗೆ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಇಸ್ರೇಲ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಯಹೂದಿಗಳ ನಾಡಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಆದರೆ ಪ್ರಧಾನಿ ಮೋದಿ ಇಸ್ರೇಲ್‌ ಪ್ರವಾಸದ ಬಗ್ಗೆ ಈ ವರೆಗೂ ದಿನಾಂಕ ನಿಗದಿಯಾಗಿಲ್ಲ. ತಾನೂ ಕೂಡ ಇದೇ ವರ್ಷ ಇಸ್ರೇಲ್‌, ಪ್ಯಾಲೆಸ್ತೀನ್‌, ಜೋರ್ಡಾನ್‌ ಪ್ರವಾಸ ಕೈಗೊಳ್ಳುತ್ತಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ತಿಳಿಸಿದ್ದಾರೆ.

1950ರಲ್ಲೇ ಇಸ್ರೇಲ್‌ ಗೆ ರಾಷ್ಟ್ರದ ಮಾನ್ಯತೆ ದೊರೆತಿತ್ತಾದರೂ ಸಂಪೂರ್ಣ ರಾಜತಾಂತ್ರಿಕ ಸಂಬಂಧವನ್ನು ಭಾರತ ಆ ದೇಶದೊಂದಿಗೆ ಹೊಂದಿದ್ದು 1992ರಲ್ಲಿ. ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಗೃಹ ಮಂತ್ರಿಯಾಗಿದ್ದ ಎಲ್‌.ಕೆ.ಆಡ್ವಾಣಿ ಆ ದೇಶಕ್ಕೆ ಭೇಟಿ ನೀಡಿದ್ದರು. ಬಳಿಕ ವಿದೇಶಾಂಗ ಸಚಿವರಾಗಿದ್ದ ಜಸ್ವಂತ್‌ ಸಿಂಗ್‌, ಎಸ್‌.ಎಂ. ಕೃಷ್ಣ ಕೂಡ ತೆರಳಿದ್ದರು. ತೀರಾ ಇತ್ತೀಚೆಗೆ ಗೃಹ ಸಚಿವ ರಾಜನಾಥ್‌ ಸಿಂಗ್‌ ಭೇಟಿ ನೀಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited