Untitled Document
Sign Up | Login    
Dynamic website and Portals
  
June 1, 2015

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು ಹೈಕೋರ್ಟ್ ರದ್ದು ಮಾಡಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ವಿ. ಆಚಾರ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗ್ಗೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಜಯಲಲಿತಾ ಪ್ರಕರಣದ ಸಂಬಂಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಎಸ್‍ಪಿಪಿ ವಿ.ಎಸ್. ಆಚಾರ್ಯ ಅವರು ನೀಡಿರುವ ವರದಿ ಹಾಗೂ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್ ಅವರ ಅಭಿಪ್ರಾಯವನ್ನು ಆಧರಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಜಯಲಲಿತಾ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿರ್ದೋಷಿ ಎಂದು ತೀರ್ಪು ನೀಡಿದ ನಂತರ ಜಯಲಲಿತಾ ಇತ್ತೀಚೆಗಷ್ಟೇ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited