ನವದೆಹಲಿ : ಸಂಘ ಪರಿವಾರದ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ಅನಗತ್ಯವಾಗಿತ್ತು. ಕಾನೂನಿನ ಮುಂದೆ ಎಲ್ಲಾ ಸಮುದಾಯದವರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಯುಎನ್ ಐ ನ್ಯೂಸ್ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ನಾಗರಿಕನಿಗೂ ನಮ್ಮ ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಮತ್ತು ಅದರಲ್ಲಿ ಯಾವುದೇ ರಾಜಿ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ.
ತಮ್ಮ ಸರ್ಕಾರ ಯಾವುದೇ ನಿರ್ಧಿಷ್ಟ ಸಮುದಾಯದ ವಿರುದ್ಧ ಹಿಂಸೆ ಅಥವಾ ದ್ವೇಷವನ್ನು ಸಹಿಸುವುದಿಲ್ಲ ಎಂದು ಹೇಳುವ ಮೂಲಕ ಸಂಘ ಪರಿವಾರಕ್ಕೆ ಖಡಕ್ ಸಂದೇಶವನ್ನು ರವಾನಿಸಿದ್ದಾರೆ.
ಆಡಳಿತಾರೂಢ ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ್ದು, ದೇಶದ ಜನರಿಗೆ ಅಚ್ಚೇ ದಿನ್ ಆರಂಭವಾಗಿದೆ ಎಂದು ತಿಳಿಸಿದರು.