ಇಂಪಾಲ : ಮಣಿಪುರದ ಚಂದೇಲ್ ಎಂಬಲ್ಲಿ ಉಗ್ರರು ಸೈನಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ 20 ಸೈನಿಕರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
6 ನೇ ಡೋಗ್ರಾ ರೆಜಿಮೆಂಟ್ ನ ಸೈನಿಕರು ಇಂಪಾಲದ ಕಡೆಗೆ ತೆರಳುತ್ತಿದ್ದಾಗ ಹೊಂಚು ಹಾಕಿ ಕಾಯುತ್ತಿದ್ದ ಉಗ್ರರು ಭಾರೀ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮವಾಗಿ 11 ಮಂದಿ ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಗಾಯಾಳು ಸೈನಿಕರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದುವರೆಗೆ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಸ್ಥಳಕ್ಕೆ ಪೊಲೀಸರು ಮತ್ತು ಹೆಚ್ಚು ವರಿ ಪಡೆಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸಿವೆ.