Untitled Document
Sign Up | Login    
Dynamic website and Portals
  
June 5, 2015

ಜು.1ರಿಂದ ವಿಧಾನಮಂಡಲ ವಿಶೇಷ ಅಧಿವೇಶನ

ಬೆಂಗಳೂರು : ಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ.

ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಜುಲೈ 1ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಹಾಗೂ ಜುಲೈ 13ರಿಂದ 24ರವರೆಗೆ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ.

ಸರ್ಕಾರ ಕರೆದಿರುವ ಈ ವಿಶೇಷ ಅಧಿವೇಶನಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಹಮತ ವ್ಯಕ್ತಪಡಿಸಿದ್ದು, ರಾಜ್ಯ ಬಜೆಟ್ ಮೇಲಿನ ಬೇಡಿಕೆಗಳ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆಯಾಗಲಿದೆ.

ಇದೇ ಮೊದಲ ಬಾರಿಗೆ ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.

 

 

Share this page : 
 

Table 'bangalorewaves.bv_news_comments' doesn't exist