ಢಾಕಾ : ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಬಾಂಗ್ಲಾದೇಶಕ್ಕೆ ಬಂದಿಳಿದಿದ್ದು, ಢಾಕಾ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹೂಗುಚ್ಚ ನೀಡಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
ಪ್ರಧಾನಿ ಮೋದಿ ಶನಿವಾರದಿಂದ 2 ದಿನಗಳ ಕಾಲ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ತನ್ನ ನೆಲಕ್ಕೆ ಆಗಮಿಸಿದ ಮೋದಿಯನ್ನು ಬಾಂಗ್ಲಾ ಅದ್ದೂರಿಯಾಗಿ ಸ್ವಾಗತಿಸಿದೆ. ಪ್ರಧಾನಿಯಾದ ನಂತರ ಮೋದಿ ಅವರ 19ನೇ ವಿದೇಶ ಯಾತ್ರೆ ಇದಾಗಿದೆ.
ಎರಡು ದಿನಗಳ ಭೇಟಿಯಲ್ಲಿ ತೀಸ್ತಾ ನದಿ ನೀರು ಹಂಚಿಕೆ, ಗಡಿ, ವ್ಯಾಪಾರ ಪ್ರವಾಸ ಸಂಬಂಧಿಸಿದಂತೆ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ ರಾಜಧಾನಿ ಢಾಕಾದಲ್ಲಿ ಹಬ್ಬದ ವಾತಾವರಣ ಕಂಡುಬಂದಿದೆ. ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಆಳೆತ್ತರದ ಕಟೌಟ್ ಗಳು ನಗರದ ಬೀದಿಗಳಲ್ಲಿ ರಾರಾಜಿಸುತ್ತಿದೆ.