Untitled Document
Sign Up | Login    
Dynamic website and Portals
  
June 7, 2015

ಗ್ರಾಮ ಪಂಚಾಯಿತಿ ಚುನಾವಣೆ: 21 ಜಿಲ್ಲೆಯಲ್ಲಿ ಕಾಂಗ್ರೆಸ್‌ ಗೆ ಜಯ

ಬೆಂಗಳೂರು : ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ ನಂತರ ಬರಲಿರುವ ವಿಧಾನಸಭೆ ಚುನಾವಣೆಯಲ್ಲೂ ಮುಂದುವರೆ ಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಪುಣ್ಯಸ್ಮರಣೆ ಪ್ರಯುಕ್ತ ವಿಧಾನಸೌಧದ ಆವರಣದ ಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿಯವರಿಗೆ 5 ಹಾಗೂ ಜೆಡಿಎಸ್‌ನವರಿಗೆ 3 ಜಿಲ್ಲೆಗಳಲ್ಲಿ ಮುನ್ನಡೆ ಸಿಕ್ಕಿದ್ದು, ಉಳಿದಂತೆ 21 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮುನ್ನಡೆ ಸಿಕ್ಕಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದೇ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿ.ಪಂ, ತಾ.ಪಂ ಹಾಗೂ ವಿಧಾನಸಭೆ ಚುನಾವಣೆಗಳಲ್ಲೂ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಅರಸು ಜನ್ಮ ಶತಮಾನೋತ್ಸವ: ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ದುರ್ಬಲ ವರ್ಗಗಳಿಗೆ ರಾಜಕೀಯ, ಸಾಮಾಜಿಕ ಶಕ್ತಿ ತಂದುಕೊಟ್ಟ ಡಿ. ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಇಡೀ ವರ್ಷ ವಿವಿಧ ಕಾರ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯಲು ನಮಗೆ ದೇವರಾಜ ಅರಸು ಅವರೇ ಸ್ಫೂರ್ತಿ ಎಂದು ಸಿದ್ದರಾಮಯ್ಯ ಇದೇ ವೇಳೆ ಅವರು ತಿಳಿಸಿದರು.

ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು 10 ದಿನ ಬೆಳಗಾವಿ ಮತ್ತು 10 ದಿನ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited