Untitled Document
Sign Up | Login    
Dynamic website and Portals
  
June 7, 2015

ಬಾಂಗ್ಲಾದ ರಾಷ್ಟ್ರೀಯ ದೇವಾಲಯ ಢಾಕೇಶ್ವರಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ಢಾಕಾದ ರಾಮಕೃಷ್ಣ ಮಠದಲ್ಲಿ ಪ್ರಧಾನಿ ಮೋದಿ ಢಾಕಾದ ರಾಮಕೃಷ್ಣ ಮಠದಲ್ಲಿ ಪ್ರಧಾನಿ ಮೋದಿ

ಢಾಕಾ : ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸಮಿತಿ ಸದಸ್ಯರನ್ನು ಪ್ರಧಾನಿ ಭೇಟಿ ಮಾಡಿದ್ದಾರೆ. ಈ ವೇಳೆ ದೇವಾಲಯ ಸಮಿತಿಯಿಂದ ಪ್ರಧಾನಿಗೆ ನೆನಪಿನ ಕಾಣಿಕೆ ನೀಡಲಾಯಿತು. ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ರಾಮಕೃಷ್ಣ ಮಿಷನ್​ ಗೆ ಭೇಟಿ ನೀಡಿದ್ದು ಅಲ್ಲಿನ ಸನ್ಯಾಸಿಗಳೊಂದಿಗೆ ಪ್ರಧಾನಿ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಬಾಂಗ್ಲಾದಲ್ಲಿರುವ ರಾಮಕೃಷ್ಣ ಮಠದಲ್ಲೂ ಸಹ ಪ್ರಧಾನಿ ಮೋದಿ ಅವರನ್ನು ಅದ್ಧೂರಿಯಿಂದ ಸ್ವಾಗತಿಸಲಾಯಿತು. ಪ್ರವಾಸದ ಅಂತಿಮ ದಿನವಾದ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಇದಾದ ಬಳಿಕ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಪ್ರಧಾನಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ 'ಫ್ರೆಂಡ್ ಆಫ್ ಬಾಂಗ್ಲಾದೇಶ್ ಲಿಬರೇಷನ್ ವಾರ್ ಅವಾರ್ಡ್' ಪಡೆದುಕೊಳ್ಳಲಿದ್ದಾರೆ.

ಬಾಂಗ್ಲಾದ ರಾಜಕೀಯ ಗಣ್ಯರು ಹಾಗೂ ಉದ್ಯಮಿಗಳನ್ನು ಭೇಟಿ ಮಾಡಿ ಬಂಗಬಂಧು ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ಭಾಷಣ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ, ಸಂಜೆ ವೇಳೆಗೆ ಭಾರತಕ್ಕೆ ವಾಪಸ್ಸಾಗಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited