ಢಾಕಾ : ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ.
ಬಾಂಗ್ಲಾದ ಢಾಕಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
1971ರಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಸಹಕಾರ ನೀಡಿದ ಕಾರಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಾಂಗ್ಲಾದೇಶ ಸರ್ಕಾರ 'ಬಾಂಗ್ಲಾದೇಶ್ ಲಿಬರೇಷನ್ ವಾರ್ ಅವಾರ್ಡ್' ಪ್ರಶಸ್ತಿಯನ್ನು ಘೋಷಿಸಿತ್ತು.