Untitled Document
Sign Up | Login    
Dynamic website and Portals
  
June 8, 2015

ಬಿ.ಎಸ್.ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬಿ.ಎಸ್.ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು : ಸರಿಯಾಗಿ ಸರ್ಕಾರ ನಡೆಸಿದ್ದರೆ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಬಿ.ಎಸ್.ವೈಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ನೇರ ಸಹಭಾಗಿತ್ವ ಇದೆ ಪ್ರತಿಪಕ್ಷಗಳು ರಾಜ್ಯದಲ್ಲಿ ನಡೆದಿರುವ ಹಗರಣಗಳ ಬಗ್ಗೆ ಹೋರಾಟ ಮಾಡುತ್ತಿದ್ದರೂ ಮುಖ್ಯಮಂತ್ರಿಯವರು ಭಂಡತನದಿಂದ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ ಎಂಬ ಯಡಿಯೂರಪ್ಪನವರ ಟೀಕೆಗೆ ಪ್ರತಿಕ್ರಿಯಿಸಿದರು.

ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದೆ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿದ್ದಾರೆ. ಇದರಿಂದ ಹತಾಶರಾಗಿರುವ ಯಡಿಯೂರಪ್ಪನವರು ಸೋಲನ್ನೊಪ್ಪಿಕೊಳ್ಳಲಾಗದೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರಸ್ತುತ ಜಿಡಿಪಿ (ಆರ್ಥಿಕ ಪ್ರಗತಿ) ಆಧಾರದ ಮೇಲೆ ಕೆಲವು ಯೋಜನೆಗಳಿಗಾಗಿ ಸಾಲ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ಅಚ್ಚರಿ ಪಡುವಂತಹ ವಿಷಯವಿಲ್ಲ. ಹಿಂದೆ ಇದ್ದ ಎಲ್ಲಾ ಸರ್ಕಾರಗಳು ಸಹ ಈ ನೀತಿಯನ್ನು ಅನುಸರಿಸುತ್ತಿದ್ದವು. ನಾವು ಶೇ. 24ರ ಮಿತಿಯನ್ನು ಕಾಯ್ದುಕೊಂಡಿದ್ದೇವೆ. ಆದರೂ ಇದನ್ನು ತಿಳಿದುಕೊಳ್ಳದೆ ಸುಮ್ಮನೆ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪನವರಿಗೆ ನನ್ನ ಹಾಗೂ ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ, ಸುಮ್ಮನೆ ಟೀಕೆಗಳನ್ನು ಮಾಡುವುದನ್ನು ಬಿಟ್ಟು ಅಭಿವೃದ್ಧಿ ಯೋಜನೆಗಳಿಗೆ ಬೆಂಬಲ ನೀಡಬೇಕು ಎಂದು ತಿಳಿಸಿದರು.

ಇನ್ನು ಬಹುತೇಕ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ನಾಲ್ಕೈದು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಇದಕ್ಕೆ ಸದಸ್ಯರು, ನಿರ್ದೇಶಕರನ್ನು ನೇಮಕ ಮಾಡುವ ಕುರಿತಂತೆ ಚರ್ಚೆ ನಡೆದಿದ್ದು, ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಮಾತುಕತೆ ಪೂರ್ಣಗೊಳಿಸಿ ಘೋಷಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಸಚಿವ ಸಂಪುಟ ಪುನರ್ ರಚನೆ ಕುರಿತಂತೆ ಸೋನಿಯಾ ಗಾಂಧಿಯವರ ಜೊತೆ ಚರ್ಚೆ ನಡೆಸಲಿದ್ದೇನೆ ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited