ನವದೆಹಲಿ: : ಪ್ರಸಕ್ತ ವರ್ಷ ಮುಂಗಾರು ಮಳೆ ಕೊರತೆಯಾಗಿ ಹೊಸ ಸವಾಲು ಎದುರಾಗುವುದು ಖಚಿತವಾದ ಹಿನ್ನೆಲೆಯಲ್ಲಿ, ಸವಾಲನ್ನು ಅವಕಾಶವಾಗಿ ಪರಿವರ್ತಿ ಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದ್ಯದ ಸ್ಥಿತಿಯಿಂದ ಹೊರಬರುವ ನಿಟ್ಟಿನಲ್ಲಿ ಕೃಷಿ ಹೊಂಡ ನಿರ್ಮಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಸದ್ಯದ ಪರಿಸ್ಥಿತಿಯಿಂದ ದೇಶವನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ನೀರಾವರಿ ವಲಯದಲ್ಲಿ ತಾಂತ್ರಿಕ ಬದಲಾವಣೆ ಮಾಡಿಕೊಳ್ಳಬೇಕು. ಇಂಥ ನಿರ್ಧಾರಗಳು ರೈತರಿಗೆ ತಕ್ಷಣದ ಪರಿಹಾರವನ್ನು ಒದಗಿಸುವಂತಿರಬೇಕು ಎಂದು ತಿಳಿಸಿದ್ದಾರೆ.