Untitled Document
Sign Up | Login    
Dynamic website and Portals
  
June 10, 2015

ವಿಶ್ವ ಯೋಗ ದಿನ: ವೆಬ್ ಸೈಟ್ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ಅಂತಾರಾಷ್ಟ್ರೀಯ ಯೋಗ ದಿನದ ವಿಶೇಷ ವೆಬ್‌ ಸೈಟ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ.

ವಿದೇಶ ವ್ಯವಹಾರಗಳ ಸಚಿವಾಲಯ ಈ ವೆಬ್‌ ಸೈಟ್‌ ನಿರ್ವಹಿಸಲಿದ್ದು, ಜೂ.21ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳ ವಿವರ ಈ ವೆಬ್‌ ಸೈಟ್‌ ನಲ್ಲಿದೆ.

ಯೋಗಾಸಾನಗಳನ್ನು ಕರಗತ ಮಾಡಿಕೊಂಡಿರುವ ಪ್ರಧಾನಿ ಮೋದಿ, ಸಾಮಾಜಿಕ ಮಾಧ್ಯಮಗಳಲ್ಲಿ ನಾನಾ ಆಸನಗಳನ್ನು ಪೋಸ್ಟ್‌ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಫೇಸ್‌ ಬುಕ್‌ ನಲ್ಲಿ ಶಶಾಂಕಾಸನದ ವಿಡಿಯೋ ಪೋಸ್ಟ್‌ ಮಾಡಿರುವ ಪ್ರಧಾನಿ, ಸಿಟ್ಟು ಮತ್ತು ಒತ್ತಡ ನಿವಾರಣೆಗೆ ಈ ಆಸನ ಸಹಕಾರಿ ಎಂದಿದ್ದಾರೆ. 117 ರಾಷ್ಟ್ರಗಳ ಬೆಂಬಲದೊಂದಿಗೆ ಜೂನ್‌ 21 ಅಂತಾರಾಷ್ಟ್ರೀಯ ಯೋಗ ದಿನ ಎಂದು ವಿಶ್ವ ಸಂಸ್ಥೆ ಘೋಷಿಸಿದ ಹಿನ್ನಲೆಯಲ್ಲಿ ಜಾಗತಿಕವಾಗಿ ಕಾರ್ಯಕ್ರಮಕ್ಕೆ ಹೆಚ್ಚಿನ ಮನ್ನಣೆ ದೊರೆತಿದೆ.

ಯೇಮನ್ ಹೊರತುಪಡಿಸಿ, ವಿಶ್ವಸಂಸ್ಥೆಯ 192 ಸದಸ್ಯ ರಾಷ್ಟ್ರಗಳಲ್ಲಿ ಸರಕಾರ ಯೋಗ ದಿನದ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ದೆಹಲಿಯಯ ರಾಜಪಥದಲ್ಲಿ ಜೂನ್‌ 21ರ ಬೆಳಗ್ಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸುಮಾರು 35 ಸಾವಿರ ಶಾಲಾ ಮಕ್ಕಳು,ರಾಜಂತಾಂತ್ರಿಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited