Untitled Document
Sign Up | Login    
Dynamic website and Portals
  
June 11, 2015

ಬಿಬಿಎಂಪಿ ಚುನಾವಣೆ ನೆಪ: ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಬಿಎಂಪಿ ಚುನಾವಣೆ ಪೂರ್ಣಗೊಳ್ಳುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ತಮ್ಮ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಈ ನಿರ್ಧಾರ ಕೈಗೊಳ್ಳುವ ಮೂಲಕ ಸಚಿವ ಸ್ಥಾನಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ.

ಬಿಬಿಎಂಪಿ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ನಡೆಸುವ ಉದ್ದೇಶ ಹೊಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ ಒತ್ತಡ ಹಾಕಿದರೆ ಮಾತ್ರ ಅಧಿಕ ಆಷಾಢಕ್ಕೂ ಮುನ್ನ ಸಂಪುಟ ವಿಸ್ತರಣೆಗೆ ಕೈಹಾಕುವ ಸಾಧ್ಯತೆಯಿತ್ತು. ಆದರೆ, ಬಿಬಿಎಂಪಿ ಚುನಾವಣೆಗೂ ಮುನ್ನ ಸಂಪುಟ ವಿಸ್ತರಣೆ ಪಕ್ಷಕ್ಕೆ ಹಾನಿಕಾರಕ ಎಂಬುದನ್ನು ಹೈಕಮಾಂಡ್‌ ಗೆ ಮನದಟ್ಟು ಮಾಡಿಕೊಡುವುದಲ್ಲದೆ, ಸ್ವಂತ ವಿವೇಚನೆಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಅವಕಾಶವನ್ನು ಅವರು ಗಿಟ್ಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ದಿಗ್ವಿಜಯಸಿಂಗ್‌ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್‌ ಅವರನ್ನು ಭೇಟಿ ಮಾಡಿ ಬಿಬಿಎಂಪಿ ಚುನಾವಣೆಗೂ ಮುನ್ನ ಸಚಿವ ಸಂಪುಟ ವಿಸ್ತರಣೆ ಪಕ್ಷದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಮನದಟ್ಟು ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ, ಸಿಎಂ ಮನವಿಗೆ ಉಭಯ ನಾಯಕರು ಸ್ಪಂದಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ವಂತ ವಿವೇಚನೆಯಿಂದ ಕಾಂಗ್ರೆಸ್‌ ಸಿಎಂಗಳು ನಿರ್ಧಾರ ಕೈಗೊಳ್ಳುವ ಸಂಪ್ರದಾಯ ಕಾಂಗ್ರೆಸ್‌ ನಲ್ಲಿದೆ. ಹೀಗಾಗಿ ಸ್ವಂತ ವಿವೇಚನೆಯಿಂದ ನಿರ್ಧಾರ ಕೈಗೊಳ್ಳಿ ಎಂದು ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ವರಿಷ್ಠರನ್ನು ಭೇಟಿ ಮಾಡುವ ಅವಶ್ಯಕತೆ ಕಂಡುಬರದ ಕಾರಣ ತಮ್ಮ ಉದ್ದೇಶಿತ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರ ಭೇಟಿ ನಡೆಸದೇ ಸಿಎಂ ಸಿದ್ದರಾಮಯ್ಯ ನಗರಕ್ಕೆ ಹಿಂತಿರುಗಿದ್ದಾರೆ ಎಂದು ಮೂಲಗಳು ಹೇಳಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited