ನವದೆಹಲಿ : ಭಾರತೀಯ ಸೇನಾ ಕಾರ್ಯಾಚರಣೆ ವಿರುದ್ಧ ಸೇಡುತೀರಿಸಿಕೊಳ್ಳುವ ನಿಟ್ಟಿನಲ್ಲಿ 15ರಿಂದ 20 ಮಂದಿ ಬಂಡುಕೋರರು ಭಾರತದೊಳಕ್ಕೆ ನುಸುಳಿರುವ ಶಂಕೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್ ಗೆ ಸೂಚನೆ ನೀಡಿದೆ.
ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನಾಪಡೆ ನಾಗಾ ಉಗ್ರರರ ವಿರುದ್ಧ ಕಾರ್ಯಾಚರಣೆ ನಡೆಸುವ ಮೂಲಕ ಮಂಗಳವಾರ ಮುಂಜಾನೆ ದಾಳಿ ನಡೆಸುವ ಮೂಲಕ ಹತ್ಯೆಗೈದಿದ್ದರು.
ಇದೀಗ ಭಾರತೀಯ ಸೇನಾ ಕಾರ್ಯಾಚರಣೆ ವಿರುದ್ಧ ಸೇಡು ತೀರಿಸಿಕೊಳ್ಳಲು ನಾಗಾ ಉಗ್ರರು ಸಜ್ಜಾಗಿದ್ದಾರೆ ಎಂಬ ಮಾಹಿತಿ ಕೇಂದ್ರ ಗುಪ್ತಚರ ಇಲಾಖೆಗೆ ದೊರಕಿರುವ ನಿಟ್ಟಿನಲ್ಲಿ ಈಶಾನ್ಯ ಗಡಿಭಾಗದಲ್ಲಿ ಹೈಅಲರ್ಟ್ ಆಗಿರುವಂತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.