Untitled Document
Sign Up | Login    
Dynamic website and Portals
  
June 12, 2015

ಆರ್ಥಿಕಾಭಿವೃದ್ಧಿ ಪ್ರಗತಿಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ: ವಿಶ್ವ ಬ್ಯಾಂಕ್

ವಾಷಿಂಗ್ಟನ್ : ಭಾರತ ತನ್ನ ಆರ್ಥಿಕಾಭಿವೃದ್ಧಿ ಪ್ರಗತಿಯನ್ನು ಶೇ.7.5ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಚೀನಾ ದೇಶವನ್ನು ಹಿಂದಿಕ್ಕಿದೆ ಎಂದು ವಿಶ್ವ ಬ್ಯಾಂಕ್ ನ ಉಪಾಧ್ಯಕ್ಷ ಹಾಗೂ ಮುಖ್ಯ ಆರ್ಥಿಕ ತಜ್ಞ ಕೌಶಿಕ್ ಬಸು ತಿಳಿಸಿದ್ದಾರೆ.

ಪ್ರಸ್ತುತ ಚೀನಾ ದೇಶದ ಆರ್ಥಿಕ ಪ್ರಗತಿ ಶೇ.7.1ರಷ್ಟಿದೆ. ಭಾರತದಲ್ಲಿನ ಪ್ರಸಕ್ತ ಆರ್ಥಿಕ ಕ್ಷೇತ್ರದಲ್ಲಿನ ಸುಧಾರಣೆಗಳು ಮತ್ತು ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿಯ ಕಚ್ಛಾತೈಲ ಬೆಲೆ ಇಳಿಕೆ ವಾಣಿಜ್ಯೋದ್ಯಮ ರಂಗದ ಚೇತರಿಕೆಗೆ ಕಾರಣವಾಗಿದ್ದು, ಇದೇ ಕಾರಣದಿಂದಾಗಿ ದೇಶದ ಆರ್ಥಿಕ ಪ್ರಗತಿ ದರದಲ್ಲಿ ಹೆಚ್ಚಳವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಆರ್ಥಿಕ ಹಿನ್ನಡೆಯ ಹೊತ್ತಿನಲ್ಲಿಯೂ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ತೆಗೆದು ಕೆಲ ಪ್ರಮುಖ ಮತ್ತು ದಿಟ್ಟ ನಿರ್ಣಯಗಳು ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹೆಚ್ಚಾಗಿ ಹೂಡಿಕೆ ಮಾಡಲು ಕಾರಣವಾಗಿದೆ. ಬಂಡವಾಳ ಹೂಡಲು ವಿದೇಶಿ ಹೂಡಿಕೆದಾರರಲ್ಲಿ ಭಾರತದ ಬಗ್ಗೆ ಮೂಡಿರುವ ವಿಶ್ವಾಸದಿಂದಾಗಿ ವಿದೇಶಗಳಿಂದ ಭಾರತಕ್ಕೆ ಬರುತ್ತಿರುವ ವಿದೇಶಿ ಬಂಡವಾಳದ ಒಳ ಹರಿವು ಹೆಚ್ಚಿದೆ ಮತ್ತು ಇದು ಭಾರತ 2015ರ ಸಾಲಿನಲ್ಲಿ ಆರ್ಥಿಕಾಭಿವೃದ್ಧಿಯನ್ನು ಶೇ.7.5ರಷ್ಟು ಸಾಧಿಸಲು ಪೂರಕವಾಗಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ.

ಅಭಿವೃದ್ಧಿಶೀಲ ರಾಷ್ಟ್ರಗಳ 2015ರ ಸಾಲಿನ ಆರ್ಥಿಕಾಭಿವೃದ್ಧಿ ಪ್ರಗತಿ ದರ ಶೇ.4.4 ರಿಂದ ಶೇ.5.2 ಮತ್ತು 2016ಕ್ಕೆ ಶೇ.5.2 ಮತ್ತು 2017ಕ್ಕೆ ಶೇ.5.4 ಪ್ರಗತಿಯಲ್ಲಿ ಸಾಗಲಿದೆ ಎಂದೂ ವಿಶ್ವ ಬ್ಯಾಂಕ್‌ ತನ್ನ ವರದಿಯಲ್ಲಿ ಹೇಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited