Untitled Document
Sign Up | Login    
Dynamic website and Portals
  
June 12, 2015

ಒಂದಂಕಿ ಲಾಟರಿ ಹಗರಣ: ಪಾರಿರಾಜನ್ ಬಂಧನ ಅವಧಿ ವಿಸ್ತರಣೆ

ಬೆಂಗಳೂರು : ಒಂದಂಕಿ ಲಾಟರಿ ಹಗರಣದ ಕಿಂಗ್‌ ಪಿನ್ ಪಾರಿರಾಜನ್ ಬಂಧನ ಅವಧಿಯನ್ನು ಜೂ.26ರವರೆಗೆ ವಿಸ್ತರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಪಾರಿರಾಜನ್‌ ನನ್ನು ಪೊಲೀಸರು ಬಿಗಿಭದ್ರತೆಯಲ್ಲಿ ಕೆಜಿಎಫ್‌ನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಿದರು.

ಪೊಲೀಸ್ ವಶಕ್ಕೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನದ ಅವಧಿಯನ್ನು ಜೂ.26ರವರೆಗೆ ವಿಸ್ತರಿಸಿದೆ. ರಾಜ್ಯಾದ್ಯಂತ ದೊಡ್ಡ ಸುದ್ದಿ ಮಾಡಿ ಪೊಲೀಸ್ ಇಲಾಖೆಯನ್ನು ಅಲ್ಲೋಲ ಕಲ್ಲೋಲಗೊಳಿಸಿದ ಬಹುಕೋಟಿ ಒಂದಂಕಿ ಲಾಟರಿ ಹಗರಣದಲ್ಲಿ ಪಾರಿರಾಜನ್ ಪ್ರಮುಖ ರೂವಾರಿಯಾಗಿದ್ದ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಿತ್ತು.

ಇದಕ್ಕೂ ಮುನ್ನ ಸಿಐಡಿ ತನಿಖೆ ನಡೆಸಿದ ಸಂದರ್ಭದಲ್ಲಿ ಹಲವು ಪೊಲೀಸ್ ಅಧಿಕಾರಿಗಳ ಹೆಸರುಗಳು ಕೇಳಿಬಂದಿದ್ದವು. ಸರ್ಕಾರ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಮತ್ತು ಐಜಿಪಿಯಾಗಿದ್ದ ಧರಣೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಸದ್ಯ ಒಂದಂಕಿ ಲಾಟರಿ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited