ನವದೆಹಲಿ : ತೀವ್ರ ಕುತೂಹಲ ಹುಟ್ಟುಹಾಕಿರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಅನಂತ್ ಕುಮಾರ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ. ಅನಂತ್ ಕುಮಾರ್ ಗೆ ಸಹಾಯಕರಾಗಿ ಮತ್ತೂಬ್ಬ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ರನ್ನು ಉಪ ಉಸ್ತುವಾರಿಯಾನ್ನಾಗಿ ನೇಮಿಸಲಾಗಿದೆ.
ಈಗಾಗಲೇ ಆರ್.ಜೆ.ಡಿ, ಜೆಡಿಯು ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಮೈತ್ರಿಕೂಟ ಏರ್ಪಟ್ಟಿರುವ ಬಿಹಾರದಲ್ಲಿ ಚುನಾವಣೆ ಎದುರಿಸುವುದು ಬಿಜೆಪಿಗೆ ಸವಾಲಾಗಿದೆ.