ಶ್ರೀನಗರ : ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿಯನ್ನು ಶನಿವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ.
ಜೂನ್ 14ರ ಭಾರತ ವಿರೋಧಿ ಸಭೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳು ಹೇಳಿವೆ.
ಭಾರತ ವಿರೋಧಿ, ಪ್ರತ್ಯೇಕತಾವಾದ ಚಟುವಟಿಕೆಯಲ್ಲಿ ತೊಡಗಿರುವ ಹುರಿಯತ್ ನಾಯಕ ಸೈಯದ್ ಅಲಿ ಶಾ ಗಿಲಾನಿ ಇತ್ತೀಚೆಗೆ ಪಾಸ್ ಫೋರ್ಟ್ ಪಡೆಯುವ ಸಂದರ್ಭದಲ್ಲಿ ತಾನು ಅನಿವಾರ್ಯವಾಗಿ ಭಾರತೀಯನೆಂದು ಘೋಷಿಸಬೇಕಾಯಿತು ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು. ಅಲ್ಲದೇ ಭಾರತ ವಿರೋಧಿ ಪ್ರತಿಭಟನೆ ನಡೆಸಿ ಆಕ್ರೋಶಕ್ಕೆ ಗುರಿಯಾಗಿದ್ದರು.