Untitled Document
Sign Up | Login    
Dynamic website and Portals
  
June 14, 2015

ಜಿತೇಂದ್ರ ಸಿಂಗ್ ತೋಮರ್ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿ : ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ಇಂದು ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೋಮರ್ ಅವರನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ತೋಮರ್ ಅವರನ್ನು ಮತ್ತೆರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ನಕಲಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಕಳೆದ ಮಂಗಳವಾರ ದೆಹಲಿ ಕಾನೂನು ಸಚಿವರಾಗಿದ್ದ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ದೆಹಲಿಯ ಮೆಟ್ರೋಪಾಲಿಟನ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಇನ್ನು ಪ್ರಕರಣದಿಂದ ಆಪ್ ಪಕ್ಷ ತೀವ್ರ ಮುಜುಗರಕ್ಕೀಡಾದ ಹಿನ್ನಲೆಯಲ್ಲಿ ತೋಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೋಮರ್ ರಾಜಿನಾಮೆ ಪತ್ರವನ್ನು ಅಂಗೀಕರಿಸಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜಿನಾಮೆ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ರವಾನೆ ಮಾಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited