Jayanagar : ಬೆಂಗಳೂರಿನ ಜೆ.ಪಿ.ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.
ಬಂಧಿತರು ತಮಿಳುನಾಡು ಮೂಲದ 20 ವರ್ಷದ ಅಸಯ್ ಮತ್ತು 22 ವರ್ಷದ ಸಂತೋಷ್ ಎಂದು ತಿಳಿದು ಬಂದಿದೆ.
ಅಸಯ್ ಎಂಬಾತ ಬಾಲಕಿಯನ್ನು ನಂಬಿಸಿ ಕರೆದೊಯ್ದು ಸ್ನೇಹಿತರೊಂದಿಗೆ ಸರದಿಯಲ್ಲಿ ಅತ್ಯಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡವೊಂದಕ್ಕೆ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು ಎಂದು ಬಾಲಕಿಯ ಪೋಷಕರು ನೀಡಿದ ದೂರಿನಲ್ಲಿ ದಾಖಲಿಸಲಾಗಿದೆ.
ಸಂತ್ರಸ್ತ ಬಾಲಕಿಯ ತಂದೆ ತಾಯಿ ಈಗಾಗಲೇ ದೈವಾಧೀನರಾಗಿದ್ದು, ಅಜ್ಜಿಯೊಂದಿಗೆ ಬಾಲಕಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ. ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.