Untitled Document
Sign Up | Login    
Dynamic website and Portals
  
June 19, 2015

ಅಂತಾರಾಷ್ಟ್ರೀಯ ಯೋಗ ದಿನ: ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಯೋಗ ಪ್ರದರ್ಶನ

ಅಂತಾರಾಷ್ಟ್ರೀಯ ಯೋಗ ದಿನ (ಸಾಂದರ್ಭಿಕ ಚಿತ್ರ) ಅಂತಾರಾಷ್ಟ್ರೀಯ ಯೋಗ ದಿನ (ಸಾಂದರ್ಭಿಕ ಚಿತ್ರ)

Basavanagudi : ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಜೂನ್ 21 ರಂದು ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ 7 ಸಾವಿರಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ತಿಳಿಸಿದರು.

ಜೂನ್ 21 ರಂದು ಬೆಳಿಗ್ಗೆ 10:30 ಕ್ಕೆ ಯೋಗ ಪ್ರದರ್ಶನ ಪ್ರಾರಂಭವಾಗಲಿದ್ದು ಸುಮಾರು 20 ನಿಮಿಷ ಪ್ರದರ್ಶನ ನೀಡಲಿದ್ದಾರೆ. ವಿವಿಧ ಯೋಗ ಕೇಂದ್ರಗಳ ಶಿಕ್ಷಕರು ಯೋಗ ದಿನದಲ್ಲಿ ಪಾಲ್ಗೊಂಡು ಯೋಗ ಪ್ರದರ್ಶನ ನೀಡಲಿದ್ದಾರೆ. ಇದೇ ವೇಳೆ ಯೋಗ ಸಂಬಂಧಿತ ವಿಶೇಷ ಲೇಖನ ಮಾಹಿತಿಯನ್ನೊಳಗೊಂಡ ಸ್ಮರಣ ಸಂಚಿಕೆಯು ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ರಾಜ್ಯಪಾಲ ವಜುಭಾಯಿ ರೂಢಾಭಾಯಿ ವಾಲಾ ಅವರು ಯೋಗ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ್ ಭೇಂಡೆರವರು ಪ್ರಧಾನ ಭಾಷಣ ಮಾಡುವರು, ಕೇಂದ್ರ ರಸಗೊಬ್ಬರ ಸಚಿವ ಅನಂತ್ ಕುಮಾರ್‌ ಅವರು 'ಯೋಗ ಪ್ರದರ್ಶಿನಿ' ಉದ್ಘಾಟಿಸುವರು ಎಂದು ಹೇಳಿದರು.

ಕೇಂದ್ರ ರಸಗೊಬ್ಬರ ಸಚಿವ ಅನಂತ್ ಕುಮಾರ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವಾರು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited