Untitled Document
Sign Up | Login    
Dynamic website and Portals
  
June 20, 2015

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗಾಗಿ ಬಿಜೆಪಿಯಿಂದಲೂ ಪಾದಯಾತ್ರೆ

ಬೆಂಗಳೂರು : ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಜೆಡಿಎಸ್‌ ಪಾದಯಾತ್ರೆ ಘೋಷಿಸಿದ ಬೆನ್ನಲ್ಲೇ ಇದೀಗ ಬಿಜೆಪಿಯೂ ಪಾದಯಾತ್ರೆ ನಡೆಸುವ ನಿರ್ಧಾರ ಕೈಗೊಂಡಿದೆ.

ಈ ತಿಂಗಳ 28ರಂದು ಅಂದರೆ ವಿಧಾನಮಂಡಲ ಅಧಿವೇಶನದ ಆರಂಭವಾಗುವ ಹಿಂದಿನ ದಿನ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಜಿಲ್ಲೆಯ ಗುರುನಾಥ್‌ ಚಾಪಗಾವಿ ಎಂಬ ಕಬ್ಬು ಬೆಳೆಗಾರನ ಸ್ವಗ್ರಾಮ ಬಡಾಲ ಅಂಕಲಗಿಯಿಂದ ಒಂದು ದಿನದ ಪಾದಯಾತ್ರೆ ನಡೆಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ.

ಈ ಕುರಿತು ಬೆಂಗಳೂರಿನ ಹೊರವಲಯದ ರೆಸಾರ್ಟ್‌ ವೊಂದರಲ್ಲಿ ನಡೆದ ಪಕ್ಷದ ಶಾಸಕರು, ಸಂಸದರು ಹಾಗೂ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಈ ಮುತ್ತಿಗೆ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರಾದ ಪ್ರಹ್ಲಾದ್‌ ಜೋಶಿ, ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಎಲ್ಲ ಮುಖಂಡರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಕೊಪ್ಪಳ ಜಿಲ್ಲೆಯ ಯಲ್ಲಾಲಿಂಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸರಣಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಈ ತಿಂಗಳ 22ರಿಂದ 24ರವರೆಗೆ ಮೂರು ದಿನಗಳ ಕಾಲ ಪಕ್ಷದ ಯುವ ಮೋರ್ಚಾ, ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಗುತ್ತದೆ. ನಂತರ 27ರಂದು ಪಕ್ಷದ ಕೇಂದ್ರ ಸಮಿತಿಯಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿ.ಟಿ.ರವಿ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited