Untitled Document
Sign Up | Login    
Dynamic website and Portals
  
June 21, 2015

ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ : ಅಂತಾರಾಷ್ಟ್ರೀಯ ಯೋಗ ದಿನ'ಕ್ಕೆ ಇಂದು ಮೊದಲ ಆಚರಣೆಯ ಸಂಭ್ರಮ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಅಧಿಕೃತವಾಗಿ ಚಾಲನೆ ನೀಡಿದರು.

ದೆಹಲಿಯ ರಾಜಪಥದ ಬಳಿಯ ಬೂಟ್ ಹೌಸ್ ಬಳಿ ನಿರ್ಮಾಣವಾಗಿರುವ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೇಂದ್ರ ಸಚಿವರು, ಸಂಸದರು, ಹಿರಿಯ ಅಧಿಕಾರಿಗಳು ಮತ್ತು ದೆಹಲಿ ಸಚಿವರು ಸೇರಿದಂತೆ ಸುಮಾರು 37 ಸಾವಿರ ಮಂದಿ ಏಕಕಾಲದಲ್ಲಿ ಯೋಗ ಮಾಡುವ ಮೂಲಕ ದಾಖಲೆ ಯೋಗ ದಿನ ಆಚರಣೆ ಮಾಡಿದರು.

ರಾಜಪಥದಲ್ಲಿ ಜನಸಾಮಾನ್ಯರ ನಡುವೆ ಪ್ರಧಾನಿ ಮೋದಿ ಯೋಗ ಮಾಡಿದರು.ಇನ್ನು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಬೇಕು ಎಂದು ವಿಶ್ವಸಂಸ್ಥೆ ಕಳೆದ ಡಿಸೆಂಬರ್ ನಲ್ಲಿ ಘೋಷಣೆ ಮಾಡಿತ್ತು. ಇದರ ಅನ್ವಯ ಭಾರತದಲ್ಲಿ ಸಾಕಷ್ಟು ತಿಂಗಳ ಹಿಂದೆಯೇ ಸಾಕಷ್ಟು ಪೂರ್ವ ತಯಾರಿ ಮಾಡಿಕೊಳ್ಳಲಾಗಿತ್ತು. ಕೇಂದ್ರದ ಆಯುಷ್ ಇಲಾಖೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿದ್ದು, ಯೋಗ ದಿನಾಚರಣೆಯ ಪ್ರಚಾರಕ್ಕೆಂದೇ ಸುಮಾರು 10 ಕೋಟಿ ರೂ.ಗಳನ್ನು ವ್ಯಯಿಸಿದೆ.

ಇನ್ನು ದೆಹಲಿಯ ಮೊರಾರ್ಜಿ ದೇಸಾಯಿ ಯೋಗ ಕೇಂದ್ರದ ಸದಸ್ಯರು ದೆಹಲಿಯ ರಾಜಪಥದಲ್ಲಿ ಅಳವಡಿಸಲಾಗಿರುವ ಬೃಹತ್ ಎಲ್ ಇಡಿ ಪರದೆ ಅಳವಡಿಸಿದ್ದು, ಯೋಗ ಕುರಿತು ಸಿಡಿಗಳನ್ನು ತೋರಿಸುವ ಮೂಲಕ ನೆರೆದಿರುವ ಸಾವಿರಾರು ಮಂದಿಗೆ ಯೋಗದ ಮಾಹಿತಿ ನೀಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited