Untitled Document
Sign Up | Login    
Dynamic website and Portals
  
June 22, 2015

ಸಿದ್ದರಾಮಯ್ಯ ಬಿಎಸ್ ವೈಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ?: ಹೆಚ್.ಡಿ.ಕೆ

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ

ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಹಾಗೂ ಬಿ.ಎಸ್.ವೈ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಕ್ಕೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಧ್ವನಿ ಅಡಗಿಸಲು ಕಷ್ಟಪಡುತ್ತಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಯಾವುದೇ ಸಮಸ್ಯೆ ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಬಿಎಸ್ ವೈ ವಿರುದ್ಧ ಈಗಾಗಲೇ ಸಾಕಷ್ಟು ದೂರುಗಳಿವೆ. ಅವರಿಗೆ ಹಳೆ ತೊಂದರೆಗಳನ್ನೇ ಬಗೆಹರಿಸಿಕೊಳ್ಳಲು ಸಾಕಾಗಿ ಹೋಗಿದೆ. ಈಗ ಸಿದ್ದರಾಮಯ್ಯನವರೂ ಕೂಡಾ ಅವರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಬಳಿ ನೆರವು ಪಡೆದಿದ್ದನ್ನು ಸಿದ್ದರಾಮಯ್ಯ ನೆನಪಿಸಿಕೊಳ್ಳಬೇಕು ಎಂದು ಹೇಳಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ವಿವಿಧ ಉದ್ದೇಶಗಳಿಗಾಗಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಲಾಗಿದೆ ಎಂದು 2012ರಲ್ಲಿ ಸಿಎಜಿ ವರದಿಯಲ್ಲಿ ಬಹಿರಂಗಗೊಂಡಿತ್ತು.

ಜಯಕುಮಾರ್‌ ಹಿರೇಮಠ್ ಅವರು ಈ ವರದಿ ಆಧರಿಸಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ್ದರು. ಲೋಕಾಯುಕ್ತಕ್ಕೆ ದೂರು ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ ನೀಡಿದ್ದರಿಂದ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದಲ್ಲದೆ, ಸಿಎಜಿ ವರದಿ ಆಧಾರದ ಮೇಲೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪ್ರಕರಣಗಳ ಬಗ್ಗೆ ಎಫ್.ಐ.ಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited