Untitled Document
Sign Up | Login    
Dynamic website and Portals
  
June 22, 2015

ಅಫ್ಘಾನಿಸ್ತಾನ ಸಂಸತ್ ಭವನದ ಮೇಲೆ ಆತ್ಮಾಹುತಿ ದಾಳಿ

ಅಫ್ಘಾನಿಸ್ತಾನ ಸಂಸತ್ ಭವನದ ಮೇಲೆ ಆತ್ಮಾಹುತಿ ದಾಳಿ

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಅಫ್ಘಾನಿಸ್ತಾನದ ಸಂಸತ್ ಭವನದ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.

ಸಂಸತ್ ಭವನದ ಒಳಗೆ ಒಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದರೆ, ಸಂಸತ್ ಆವರಣದಲ್ಲಿ ಮೂರು ಬಾಂಬ್ ಸೇರಿದಂತೆ ಒಟ್ಟು ಆರು ಕಡೆ ಸ್ಫೋಟಗೊಂಡಿರುವುದಾಗಿ ತಿಳಿದುಬಂದಿದೆ.

ಸಂಸತ್ ಭವನದ ಸುತ್ತಮುತ್ತಲಿನ ಕಟ್ಟಡಗಳ ಮೇಲೆ ನಿಂತು ಉಗ್ರರು ದಾಳಿ ಮುಂದುವರಿಸಿದ್ದಾರೆ. ಸಂಸತ್ ಭವನದ ಒಳಗೆ ಹಲವಾರು ಮಂದಿ ಆತ್ಮಾಹುತಿ ಬಾಂಬ್ ದಾಳಿಕೋರರು ನುಸುಳಿದ್ದು, ರಕ್ಷಣಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ.

ಸಂಸತ್ ಭವನದ ಹೊರಭಾಗದಲ್ಲಿ ವಾಹನಗಳು ಹೊತ್ತಿ ಉರಿಯುತ್ತಿದ್ದು, ಕೆಲವು ಸಂಸದರು ಗಾಯಗೊಂಡಿದ್ದಾರೆ. 6 ಮಂದಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ರಕ್ಷಣಾ ಪಡೆಗಳಿಂದ ಸಂಸತ್ ಭವನದೊಳಗಿದ್ದ ಸಂಸದರು, ಪತ್ರಕರ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಭಾರತದ ಸಂಸತ್ ಭವನದ ಮೇಲೆ ನಡೆದ ದಾಳಿ ಮಾದರಲ್ಲಿಯೇ ಅಫ್ಘಾನ್ ಸಂಸತ್ ಮೇಲೂ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟ ತಿಳಿಯಬೇಕಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited