Untitled Document
Sign Up | Login    
Dynamic website and Portals
  
June 23, 2015

ಕುತೂಹಲಕ್ಕೆ ಕಾರಣವಾದ ಹೆಚ್.ಡಿ.ಕೆ-ಬಿಎಸ್ ವೈ ಭೇಟಿ

ಹೆಚ್.ಡಿ.ಕುಮಾರಸ್ವಾಮಿ-ಬಿ.ಎಸ್ ಯಡಿಯೂರಪ್ಪ ಭೇಟಿ ಹೆಚ್.ಡಿ.ಕುಮಾರಸ್ವಾಮಿ-ಬಿ.ಎಸ್ ಯಡಿಯೂರಪ್ಪ ಭೇಟಿ

ಹುಬ್ಬಳ್ಳಿ : ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ವಚನಭ್ರಷ್ಟ ಆರೋಪ ಹೊತ್ತ ಮೇಲೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವೈರಿಗಳಾಗಿದ್ದರು. ಆದರೀಗ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಮಾಜಿ ಸಿಎಂಗಳಿಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.

ರಾಜಕಾರಣದಲ್ಲಿ ಯಾರೂ ಶತ್ರುವೂ ಅಲ್ಲ, ಮಿತ್ರನೂ ಅಲ್ಲ ಎಂಬಂತೆ ಪಾಪ ಯಡಿಯೂರಪ್ಪ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಸು ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಅನುಕಂಪ ವ್ಯಕ್ತಪಡಿಸಿದ್ದರುರು ಇದರ ಬೆನ್ನಲ್ಲೇ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಬಸವರಾಜ ಹೊರಟ್ಟಿ, ಬಂಡೆಪ್ಪ ಕಾಶೆಂಪೂರ್ ಕೂಡಾ ಹಾಜರಿದ್ದರು.

ಕಷ್ಟದಲ್ಲಿದ್ದವರಿಗೆ ಧೈರ್ಯ ತುಂಬುವುದು ನಮ್ಮ ಸಂಸ್ಕೃತಿ. ಯಡಿಯೂರಪ್ಪನವರು ಈಗ ಕಷ್ಟದಲ್ಲಿದ್ದಾರೆ. ಹಾಗಾಗಿ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿ ಎಂದು ಕುಮಾರಸ್ವಾಮಿ ಅವರು ಯಡಿಯೂರಪ್ಪ ಭೇಟಿ ನಂತರ ತಿಳಿಸಿದ್ದಾರೆ.

ಯಡಿಯೂರಪ್ಪ ಮೇಲೆ ರಾಜ್ಯ ಸರ್ಕಾರ ಕೇಸ್ ದಾಖಲಿಸುತ್ತಿದೆ. ಹೀಗೆ ಮಾಡಿದರೆ ಅವರ ವಿರುದ್ಧ ನೂರಾರು ಕೇಸು ದಾಖಲಿಸಬಹುದು. ಹಾಗಾಗಿ ಇದಕ್ಕೆಲ್ಲಾ ಹೆದರಬೇಡಿ ಎಂದು ಧೈರ್ಯ ಹೇಳಿದ್ದೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited