Untitled Document
Sign Up | Login    
Dynamic website and Portals
  
June 24, 2015

ನ್ಯಾಷನಲ್ ಹೆರಾಲ್ಡ್ ಹಗರಣ: ಸೋನಿಯಾ, ರಾಹುಲ್ ಗೆ 1,300 ಕೋಟಿ ರೂ. ದಂಡ ಸಾಧ್ಯತೆ

ಸೋನಿಯಾ ಗಾಂಧಿ - ರಾಹುಲ್ ಗಾಂಧಿ (ಫೈಲ್ ಚಿತ್ರ) ಸೋನಿಯಾ ಗಾಂಧಿ - ರಾಹುಲ್ ಗಾಂಧಿ (ಫೈಲ್ ಚಿತ್ರ)

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಆದಾಯ ತೆರಿಗೆ ಸಂಕಷ್ಠ ಎದುರಾಗಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ್ದ ರೂ.1600 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ 1,300 ಕೋಟಿ ರೂಪಾಯಿ ಬೃಹತ್ ಮೊತ್ತದ ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ, ಯಂಗ್ ಇಂಡಿಯಾ ಲಿಮಿಟೆಡ್ ನಿಂದ ಆದಾಯ ಗಳಿಸಿರುವ ಪ್ರಕರಣದಲ್ಲಿ ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಸೋನಿಯಾ ಗಾಂಧಿಯವರನ್ನು ನೋಟಿಸ್ ನೀಡಿ ಕೇಳುವ ಸಾಧ್ಯತೆ ಇದೆ ಎಂದು ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್‌ ಉಪಾಧ್ಯಕ್ಷ (ಆಗಿನ ಪ್ರಧಾನ ಕಾರ್ಯದರ್ಶಿ) ರಾಹುಲ್ ಗಾಂಧಿ ಅವರು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಎಂಬ ಸಾರ್ವಜನಿಕ ಸಂಸ್ಥೆಯನ್ನು ಖಾಸಗಿ ಕಂಪನಿಯನ್ನಾಗಿ ಮಾರ್ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿ ದೂರು ದಾಖಲಿಸಿದ್ದರು.

ಯಂಗ್ ಇಂಡಿಯನ್ ಎಂಬ ಹೆಸರಿನ ಖಾಸಗಿ ಕಂಪನಿ ಸ್ಥಾಪಿಸಿಕೊಂಡಿರುವ ಸೋನಿಯಾ ಮತ್ತು ರಾಹುಲ್ ಇದರ ಮೂಲಕ ಹೆರಾಲ್ಡ್ ಮಾತೃಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಎಂಬ ಪಬ್ಲಿಕ್ ಕಂಪನಿಯನ್ನು ಖರೀದಿಸಿದ್ದಾರೆ. ಇದಕ್ಕಾಗಿ ಎಐಸಿಸಿ 90 ಕೋಟಿ ರೂ. ಸಾಲವನ್ನು ಯಾವುದೇ ಭದ್ರತೆಯಿಲ್ಲದೆ ಯಂಗ್ ಇಂಡಿಯನ್‌ಗೆ ನೀಡಿದೆ. ವಾಣಿಜ್ಯ ಉದ್ದೇಶಗಳಿಗಾಗಿ ರಾಜಕೀಯ ಪಕ್ಷವೊಂದು ಸಾಲ ನೀಡುವುದು ಆದಾಯ ತೆರಿಗೆ ಕಾಯ್ದೆ ಅಡಿಯಲ್ಲಿ ಕಾನೂನಿನ ಸ್ಪಷ್ಟ ಉಲ್ಲಂಘನೆ ಎಂದು ಸ್ವಾಮಿ ಆರೋಪಿಸಿದ್ದರು.

ನ್ಯಾಷನಲ್ ಹೆರಾಲ್ಡ್ ಮತ್ತು ಕ್ವಾಮಿ ಆವಾಜ್ ಎಂಬ ವಾರ್ತಾಪತ್ರಿಕೆಗಳ ಒಡೆತನ ಹೊಂದಿದ್ದ ದಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಕಂಪನಿ ದೆಹಲಿ ಮತ್ತು ಉತ್ತರಪ್ರದೇಶಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದೆ.

ಸುಮಾರು 1,600 ಕೋಟಿ ರೂ. ಮೌಲ್ಯದ ದೆಹಲಿಯ ಹೆರಾಲ್ಡ್ ಹೌಸ್ ಕಬಳಿಸಲು ಸೋನಿಯಾ ಹಾಗೂ ರಾಹುಲ್ ಅವರು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಕಂಪನಿಯೊಂದಿಗೆ ಅಕ್ರಮ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಈ ಬೆಳವಣಿಗೆಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಇದು ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸರಕಾರದ ದುರುದ್ದೇಶಪೂರಿತ ತಂತ್ರವಾಗಿದೆ ಎಂದು ಆರೋಪಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited