BW News Bureau : ಗುರುವಾರ 12 ಗಂಟೆಗೆ ನಡೆಯಲಿರುವ ರಾಜ್ಯ ಚುನಾವಣಾ ಆಯೋಗದ ಪತ್ರಿಕಾ ಗೋಷ್ಠಿಯಲ್ಲಿ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟವಾಗಲಿದೆ.
ಜುಲೈ ಕೊನೆಯ ವಾರದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ರಾಜ್ಯ ಚುನಾವಣಾ ಆಯುಕ್ತರಾದ ಶ್ರೀನಿವಾಸ ಚಾರಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದು, ಹೈ ಕೋರ್ಟ್ ನಿರ್ದೇಶನದ ಮೇರೆಗೆ ಬಿಬಿಎಂಪಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದ್ದಾರೆ.
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮೂಲಭೂತ ಸೌಕರ್ಯ ನಿರ್ಮಾಣ ಸಂಬಂಧಿ 361.22 ಕೋಟಿ ರೂ. ಮೊತ್ತದ ಯೋಜನೆಗಳಿಗೆ ರಾಜ್ಯ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.